Friday, December 5, 2025

Latest Posts

ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆ ಮಾಡಿದೆ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ

- Advertisement -

ಬೆಂಗಳೂರು: ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಮಾಡಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇಂದು ಅವರು ಸರಣಿ ಟ್ವಿಟ್ ಮಾಡಿದ್ದು, ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ಹೇಳಿದ್ದಾರೆ.

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಎಂದು ತಿಳಿಸಿದ್ದಾರೆ.

ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು ಎಂದಿದ್ದಾರೆ.

ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಕರ್ತವ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ಆಗ್ರಹಿಸಿದ್ದಾರೆ.

- Advertisement -

Latest Posts

Don't Miss