Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಎಷ್ಟೇ ಪ್ರಯತ್ನಿಸಿದ್ರೂ ಕ್ರೈಂ ರೇಟ್ ಮಾತ್ರ ಹತೋಟಿಗೆ ಬರುತ್ತಿಲ್ಲ. ಇದರಿಂದಾಗಿ ಸರ್ಕಾರದ ವಿರುದ್ಧ ಅವಳಿ ನಗರ ಜನತೆ ರೊಚ್ಚಿಗೆದ್ದಿದೆ.
ಒಂದೇ ತಿಂಗಳಲ್ಲಿಯೇ ಇಬ್ಬರು ಯುವತಿಯರ ಬರ್ಬರ ಹತ್ಯೆಯಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವಳಿ ನಗರದ ಜನ, ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಕೊಲೆಗಳಿಂದ ಸರ್ಕಾರಕ್ಕೂ ಚಿಂತೆಯುಂಟಾಗಿದೆ. ಹೀಗಾಗಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಸರ್ಕಾರ, ಭರ್ಜರಿ ಸರ್ಜರಿ ಮಾಡಿದೆ. ಓರ್ವ ಡಿಸಿಪಿ, ಒಬ್ಬ ಇನ್ಸ್ಪೆಕ್ಟರ್ ಮತ್ತು ಮಹಿಳಾ ಪೇದೆಯನ್ನ ಅಮಾನತು ಮಾಡಿದೆ. ಆದರೂ ಕೂಡ ಅವಳಿ ನಗರದ ಜನರ ಮಾತ್ರ ಆಕ್ರೋಶ ಮಾತ್ರ ನಿಂತಿಲ್ಲ.
ಹಾಗಾಗಿ ಗೃಹ ಸಚಿವ ಡಾ.ಜೀ.ಪರಮೇಶ್ವರ್ ಹುಬ್ಬಳ್ಳಿಗೆ ಆಗಮಿಸಲಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆ ನಂತ್ರ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿ, ಅವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಇನ್ನು ನಿನ್ನೆ ತಾನೇ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಹುಬ್ಬಳ್ಳಿಗೆ ಭೇಟಿ ನೀಡಿ, ಸಭೆ ನಡೆಸಿದ್ದು, ನೇಹಾ ಮತ್ತು ಅಂಜಲಿ ಮನೆಗೂ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ಹೀಗಾಗಿ ಎಡಿಜಿಪಿಯಿಂದ ಮಾಹಿತಿ ಕಲೆ ಹಾಕಿ, ಡಾ.ಜೀ.ಪರಮೇಶ್ವರ್ ತಾವೇ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!
ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ