Kolar News: ಕೋಲಾರ: ಕೋಲಾರದ ಮಾಲೂರಿನ ಎಲುವಳ್ಳಿ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳ ಶೋಷಣೆ ಘಟನೆ ಬಳಿಕ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಶಾಲೆಗೆ ಭೇಟಿ ನೀಡಿದರು. ಅಲ್ಲದೇ, ಅಲ್ಲಿನ ಮಕ್ಕಳ ಜೊತೆ ಪ್ರತ್ಯೇಕವಾಗಿ ಮಾತನಾಡಿ ಸಾಂತ್ವಾನ ಹೇಳಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳ ಕೈಯಲ್ಲಿ ಶೌಚಗುಂಡಿ ಶುಚಿಗೊಳಿಸಿರುವುದು ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ. ವಿದ್ಯಾರ್ಥಿ ವೃಂದಕ್ಕೆ ಮಾಡಿದ ಅಪಮಾನವನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಅನೇಕ ವಸತಿ ಶಾಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ರಾಜ್ಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕಾಗಿದೆ.
ಹಿಂದುಳಿದ ವರ್ಗದ ಮಕ್ಕಳು ಎಂದರೆ ತಿರಸ್ಕಾರ ಮನೋಭಾವ ತೋರಿಸಬಾರದು. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಂತಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು ಅದು ಸಾದ್ಯವಾಗದೆ ಲೇಟಾಗಿ ಬೆಳಕಿಗೆ ಬಂದಿದೆ. ಇದು ರಾಜ್ಯದ ಎಲ್ಲಾ ವಸತಿ ಶಾಲೆಗಳಿಗೆ ಎಚ್ಚರಿಕೆಯ ಘಂಟೆ ಯಾಗಿದೆ . ಇಂತಹ ಕೇಸ್ ಗಳಲ್ಲಿ ಶಿಕ್ಷೆಯ ಪ್ರಮಾಣ ಬಹಳ ಕಡಿಮೆ ಇದೆ . ಸರ್ಕಾರ ಕೇವಲ ಕೇಸ್ ಹಾಕಿ ಸುಮ್ಮನಾಗಬಾರದು , ಇದರ ಜವಾಬ್ದಾರಿಯನ್ನು ಸರ್ಕಾರ ಹೊರಬೇಕು. ವಸತಿ ಶಾಲೆಗಳ ಕುಂದು ಕೊರತೆಗಳ ಬಗ್ಗೆ ಎಸ್ ಐ ಟಿ ತನಿಖೆ ನಡೆಯಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಶೆಟ್ಟರ್ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?
ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು