Sunday, February 9, 2025

Latest Posts

ಕರ್ನಾಟಕದ ಖೋಖೋ ಆಟಗಾರರನ್ನು ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

- Advertisement -

Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ ಕೋಚ್‌ಗಳಿಗೆ ಸನ್ಮಾನ ಮಾಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಕೋಚ್ ಶ್ರೀ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಕೂಡ ಗೌರವಿಸಲಾಯಿತು. ನಿಮ್ಮ ಭವಿಷ್ಯ ಉಜ್ವಲವಾಗಲಿ ಹಾಗೂ ನಿಮ್ಮ ಸಾಧನೆ ಯುವ ಜನರಿಗೆ ಪ್ರೇರಣೆಯಾಗಲಿ ಎಂದು ಹಾರೈಸಲಾಯಿತು. ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಆಶಯದಂತೆ ಕೇಂದ್ರ ಸರಕಾರವು ದೇಶೀಯ ಕ್ರೀಡೆಗಳಿಗೆ ಬಹಳಷ್ಟು ಒತ್ತು ನೀಡುತ್ತಿದೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss