Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು. ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ ಎಂದು ಕರೆ ನೀಡಿದ್ದಾರೆ.
HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು.
ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ… pic.twitter.com/o6Ack4RVSH
— Nikhil Kumar (@Nikhil_Kumar_k) September 6, 2024