Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಹೌದು.. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿ ಅದ್ದೂರಿಯಾಗಿ ಸ್ವಾಗತಿಸಿದರು.
ಇನ್ನೂ ಐದನೇ ಬಾರಿಗೆ ಅದೃಷ್ಟ ಪರೀಕೆಗೆ ಇಳಿದಿರುವ ಪ್ರಹ್ಲಾದ ಜೋಶಿಯವರ ಪರ ಘೋಷಣೆಗಳು ಮೊಳಗಿದ್ದು, ಕಾರ್ಯಕರ್ತರ ಹುಮ್ಮಸ್ಸುನ್ನು ಹೆಚ್ಚಿಸಿವೆ..
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಹಲವು ಹಾಲಿ ಸಂಸದರಿಗೆ ಬಿಜೆಪಿ ಶಾಕ್
ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ