Hubballi Political News: ಹುಬ್ಬಳ್ಳಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ ಮಾರೆವ್ವ ಸುರಪುರ ಅವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಾಗಿದೆ.
ಸಮಾರಂಭದಲ್ಲಿ ಶಾಸಕ ಮಹೇಶ ತೆಂಗಿನಕಾಯಿ ಸೇರಿದಂತೆ ಪ್ರಮುಖರಿದ್ದರು. ಓರ್ವ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ನೆರವೇರಿಸಿ ಆದರ್ಶ ಮೆರೆದಿದ್ದಾರೆ. ಧ್ವಜಾರೋಹಣದ ನಂತರ ಮಾರೆವ್ವ ಸುರಪುರ ಸೇರಿದಂತೆ ಪಾಲಿಕೆಯ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಜೀವಿಗಳಾಗಿದ್ದಾರೆ. ಅಂಥವರನ್ನು ಗುರುತಿಸಿ, ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟ್ವೀಟ್ ಮಾಡಿದ್ದಾರೆ.
2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ