ನಾಳೆ ನಡೆಯಬೇಕಿದ್ದ ಮೈಸೂರು ವಿವಿ ಸ್ನಾತಕ ಪದವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ರಾಜ್ಯ ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ನಾಳೆ ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದಂತ ಮೈಸೂರು ವಿಶ್ವವಿದ್ಯಾಲಯದ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಮೈಸೂರು ವಿವಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 02-05-2022ರಂದು ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಿಗದಿಯಾಗಿದ್ದಂತ ಸ್ನಾತಕ ಪದವಿ – ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ದಿನಾಂಕ 07-05-2022ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ.

About The Author