Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಗೆ ಖಾಲಿ ಉಳಿದಿದ್ದ ಏಕೈಕ ಸದಸ್ಯ ಸ್ಥಾನಕ್ಕೆ ಬಿಜೆಪಿಯ ರತ್ನಾಬಾಯಿ ನಾಝುರೆ ಅವಿರೋಧವಾಗಿ ಆಯ್ಕೆಯಾದರು.
ಇಲ್ಲಿಯ ಪಾಲಿಕೆ ಸಭಾಭವನದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ರತ್ನಾಬಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿಂದೆ ಆಯ್ಕೆ ಸಂದರ್ಭದಲ್ಲಿ ರತ್ನಾಬಾಯಿ ನಾಝುರೆ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಈ ಸ್ಥಾನ ಖಾಲಿ ಉಳಿದಿತ್ತು. ಆಗ, ಲೆಕ್ಕಗಳ ಸ್ಥಾಯಿ ಸಮಿತಿಯ 6 ಸದಸ್ಯ ಸ್ಥಾನಗಳಿಗೆ ಹಾಗೂ ಉಳಿದ 3 ಸ್ಥಾಯಿ ಸಮಿತಿಗಳ ಎಲ್ಲ ಸದಸ್ಯ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಇಂದು ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಸದಸ್ಯರು ಹಾಜರಿದ್ದರು. ಕಾಂಗ್ರೆಸ್ ಸದಸ್ಯರು ಹಾಜರಿದ್ದರೂ ನಾಮಪತ್ರ ಸಲ್ಲಿಸಲಿಲ್ಲ. ಮೇಯರ್ ವೀಣಾ ಬರದ್ವಾಡ, ಉಪ ಮೇಯರ್ ಸತೀಶ ಹಾನಗಲ್, ಸಭಾನಾಯಕ ಶಿವು ಹಿರೇಮಠ, ಸಹಾಯಕ ಪ್ರಾದೇಶಿಕ ಆಯುಕ್ತ ಎಸ್.ಎಸ್. ಬಿರಾದಾರ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಪರಿಷತ್ ಕಾರ್ಯದರ್ಶಿ ಗುರುಸಿದ್ದಪ್ಪ ಡಂಬಳ ಇದ್ದರು.
ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ
ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾಪ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸವದಿ..



