Friday, April 4, 2025

Latest Posts

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

- Advertisement -

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ

,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.    ಇದರಿಂದಾಗಿ ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಸ್ ಗಳು ನಿಲ್ದಾಣದಲ್ಲಿಯೇ ನಿಂತಿದ್ದು, ಸಂಪರ್ಕ ಕಡಿತಗೊಂಡಿದ್ದು, ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಾಯುಭಾರ ಕುಸಿತದಿಂದಾಗಿ ಇಂದು  ದಕ್ಷಿಣ ತಮಿಳುನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಸಮುದ್ರದಲ್ಲಿ ಬಿರುಗಾಳಿ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ

- Advertisement -

Latest Posts

Don't Miss