Wednesday, February 5, 2025

Latest Posts

ಉಪ್ಪಾರ ಸಮುದಾಯದವರಿಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

- Advertisement -

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ  ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ‌.ಪುಟ್ಟರಂಗ ಶೆಟ್ಟಿಯವರಿಗೆ  ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ‌ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಷ್ಣು ಲಾತೂರ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ ಆಯ್ಕೆಯಾದ ಸಿ. ಪುಟ್ಟರಂಗಶೆಟ್ಟಿಯವರಿಗೆ ಗೌರವ ಅಭಿನಂದನಾ ಸಮಾರಂಭ ಹಾಗೂ ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್ ಸಿ ಹಾಗೂ ದ್ವೀತಿಯ ಪಿಯುಸಿ ಸಾಲಿನಲ್ಲಿ ಶೇ ೮೦%  ಹಾಗೂ ಅಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಮತ್ತು ಶೈಕ್ಷಣಿಕ ವರ್ಷದಲ್ಲಿ  ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೂ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ೫ ಸಾವಿರಕ್ಕೂ ಹೆಚ್ಚು ಜನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.

ಇನ್ನೂ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ,  ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ವಿಪಕ್ಷ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿ ಸಂಸದರಾದ ಮಂಗಳಾ ಅಂಗಡಿ,  ಶಾಸಕರಾದ ಅರವಿಂದ್ ಬೆಲ್ಲದ್, ಪ್ರಸಾದ್ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಎಂ.ಆರ್.ಪಾಟೀಲ್, ಮಹೇಶ ಟೆಂಗಿನಕಾಯಿ ಸೇರಿದಂತೆ ಮೊದಲಾದವರು ಆಗಮಿಸಲಿದ್ದಾರೆ.

ಉಪ್ಪಾರ ಸಮಾಜ ಸಾಮಾಜಿಕ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತಿ ಹಿಂದುಳಿದ ಸಮಾಜವಾಗಿದ್ದು, ಸರ್ಕಾರದಿಂದ ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸು ಮಾಡಿದ್ದು, ಈ ಅಧ್ಯಯನ ಪ್ರಗತಿಯಲ್ಲಿದೆ, ಉಪ್ಪಾರ ಸಮಾಜವನ್ನು ಎಸ್.ಸಿ ಅಥವಾ ಎಸ್.ಟಿ  ಸಮುದಾಯಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಒತ್ತಾಯಿಸಲು ಕಾರ್ಯಕ್ರಮಕ್ಕೆ ಬರುವ ಅತಿಥಿಗಳಿಗೆ ಮನವಿ ನೀಡಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ಮೈಲಾರ್, ಈಶ್ವರಪ್ಪ ಶಿರಕೋಳ, ರಾಮಕೃಷ್ಣ ಬಬಲಿ, ಮಾರುತಿ ಮೆಳವಂಕಿ, ಹನುಮಂತಪ್ಪ ಹಿತ್ತಲಿಮನಿ ಉಪಸ್ಥಿತರಿದ್ದರು.

Gadag ; ಬರಪಿಡಿತ ಪ್ರದೇಶದಿಂದ ಕೈ ಬಿಟ್ಟ ಹಿನ್ನೆಲೆ ಮುಂಡರಗಿಯಲ್ಲಿ ಪ್ರತಿಭಟನೆ..!

ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

’75 ವರ್ಷ ನಾವು ಚಿಲ್ಲರೆ ಮೇಲೆ ಕಟ್ಟಿದ ಬುನಾದಿ ಮೇಲೆ ಇವರು ನೋಟು ಮಾಡಿದ್ರು’

- Advertisement -

Latest Posts

Don't Miss