Friday, October 18, 2024

Latest Posts

ಯುಪಿಎಸ್ಸಿ’ಯನ್ನೇ ಜಯಿಸಿದ ಕಣ್ಣೇ ಕಾಣದ ವಿದ್ಯಾರ್ಥಿನಿ ‘ಮೇಘನಾ ಕೆ.ಟಿ.’

- Advertisement -

‘ಯುಪಿಎಸ್ಸಿ’ ಪರೀಕ್ಷೆಯನ್ನು ಎರಡೆರಡು ಬಾರಿ ಜಯಿಸಿದ ಕಣ್ಣು ಕಾಣದ ವಿದ್ಯಾರ್ಥಿನಿ ಮೇಘನಾ ಕೆ.ಟಿ.
2020ರ ಪರೀಕ್ಷೆಯಲ್ಲಿ 465ನೇ rank ಪಡೆದಿದ್ದ ಮೇಘನಾ ಮತ್ತೆ ಪರೀಕ್ಷೆ ಬರೆದಿದ್ದರು
ಈ ಬಾರಿ 425ನೇ rank ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ಒಂದು ಬಾರಿ ಪಾಸಾಗುವುದೇ ಕಷ್ಟ. ಆದರೆ, ಕಣ್ಣೇ ಕಾಣದ ಈ ವಿದ್ಯಾರ್ಥಿನಿ ಎರಡೆರಡು ಬಾರಿ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2022ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮೈಸೂರು ಮೂಲದ ಕೆ.ಟಿ. ಮೇಘನಾ ಅವರು 425ನೇ rank ಪಡೆದಿದ್ದಾರೆ.

2020ರಲ್ಲಿ ನಡೆದ ಯುಪಿಎಸ್‌ಸಿ ಪರೀಕ್ಷೆಯಲ್ಲೂ ಆಯ್ಕೆಯಾಗಿದ್ದರು. ಆದರೆ, rank ಕಡಿಮೆ ಬಂದ ಕಾರಣ ತಮ್ಮ ಹಠವನ್ನು ಬಿಡದೆ ಛಲದಿಂದ ಮತ್ತೆ ಪರೀಕ್ಷೆ ಬರೆದಿದ್ದರು.

ಕಾಣದ ವಿಧ್ಯಾಕಣ್ಣು ರ್ಥಿನಿ ಮೇಘನಾ ಕೆ.ಟಿ ಯುಪಿಎಸ್ಸಿ ಪರೀಕ್ಷೆ ಗೆದ್ದಿದ್ದು ಹೇಗೆ..?

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ ಇವರು ಹಾಲಿ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದಾರೆ. ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ ಮೇಘನಾ ಅವರು ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ, ಶೇ.70ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮಗಿರುವ ಈ ವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದು ನಿಜಕ್ಕೂ ಹೆಮ್ಮೆಯ ವಿಷಯವೇ ಸರಿ.

2020ನೇ ಸಾಲಿನಲ್ಲೂ ಮೇಘನ 465ನೇ rank ಪಡೆದಿದ್ದರು. ಶಾಲಾ-ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ 11ನೇ rank ಪಡೆದು ಪಾಸಾಗಿದ್ದು, ಸದ್ಯ ಬೆಂಗಳೂರಿನಲ್ಲಿ ಖಜಾನೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಗಳ ಸಾಧನೆ ಬಗ್ಗೆ ಪೋಷಕರು, ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಅಭಿಜಿತ್ ಕರ್ನಾಟಕ ಟಿವಿ ಬೆಂಗಳೂರು.

- Advertisement -

Latest Posts

Don't Miss