UPSC ಫಲಿತಾಂಶ ಪ್ರಕಟ: ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ  ಇಂದು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2021 ರ ಅಂತಿಮ ಫಲಿತಾಂಶಗಳನ್ನು ಮೇ 30ರ ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ. ಇಂದು ಪ್ರಕಟಗೊಂಡಂತ ಯುಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆಯ ಅವಿನಾಶ್ 31ನೇ Rank ಪಡೆದು, ಕರ್ನಾಟಕದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ. ಇವರಲ್ಲದೇ ಕರ್ನಾಟಕ 24 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇಂದು ಪ್ರಕಟವಾದ ಅಂತಿಮ ಫಲಿತಾಂಶದಲ್ಲಿ ಶ್ರುತಿ ಶರ್ಮಾ ಅಖಿಲ ಭಾರತ ಮಟ್ಟದಲ್ಲಿ 1ನೇ ಸ್ಥಾನ ಪಡೆದಿದ್ದಾರೆ. ಎಲ್ಲಾ ಮೊದಲ ಮೂರು ಸ್ಥಾನಗಳನ್ನು ಈ ವರ್ಷ ಮಹಿಳಾ ಅಭ್ಯರ್ಥಿಗಳು ಪಡೆದಿದ್ದಾರೆ. ಶ್ರುತಿ ಸೇಂಟ್ ಸ್ಟೀಫನ್ಸ್ ಕಾಲೇಜು ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿದ್ದು, ಜಾಮಿಯಾ ಮಿಲಿಯಾ ಇಸ್ಲಾಮಿಯಾ ರೆಸಿಡೆನ್ಷಿಯಲ್ ಕೋಚಿಂಗ್ ಅಕಾಡೆಮಿಯಲ್ಲಿ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ನಡೆಸಿದ್ದರು.

ಯುಪಿಎಸ್ಸಿ ಸಿಎಸ್ಇ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 10, 2021 ರಂದು ನಡೆಸಲಾಯಿತು. ಪರೀಕ್ಷೆಯ ಫಲಿತಾಂಶಗಳನ್ನು ಅಕ್ಟೋಬರ್ 29 ರಂದು ಬಿಡುಗಡೆ ಮಾಡಲಾಯಿತು. ಮುಖ್ಯ ಪರೀಕ್ಷೆಯನ್ನು ಜನವರಿ 7 ರಿಂದ 16, 2022 ರವರೆಗೆ ನಡೆಸಲಾಯಿತು. ಫಲಿತಾಂಶಗಳನ್ನು ಮಾರ್ಚ್ 17, 2022 ರಂದು ಘೋಷಿಸಲಾಯಿತು. ಏಪ್ರಿಲ್ 5 ರಂದು ಪ್ರಾರಂಭವಾದ ಮತ್ತು ಮೇ 26ರಂದು ಮುಕ್ತಾಯಗೊಂಡ ಪರೀಕ್ಷೆಯ ಕೊನೆಯ ಸುತ್ತಿನ ಸಂದರ್ಶನ ಏರ್ಪಡಿಸಲಾಗಿತ್ತು.

About The Author