Deotional:
1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ ಮನಸ್ಸು ಏಕಾಗ್ರತೆಯಿಂದ ಇರುತ್ತದೆ ನಮ್ಮ ಮನಸ್ಸು ನಮ್ಮ ಹಿಡಿತದಲ್ಲಿರುತ್ತದೆ.
2.ತುಳಸಿ ಜಪಮಾಲೆಯು ಮನುಷ್ಯನ ಮನಸ್ಸಿನಲ್ಲಿ ಶಾಂತ ಮನೋಭಾವವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾದರೆ ಮನೆಯಲ್ಲಿ ತುಳಸಿ ಜಪಮಾಲೆಯನ್ನು ಹಿಡಿದು ಮಂತ್ರ ಪಠಿಸಬಾರದು, ಹೊರತಾಗಿ ದೇವಾಲಯಗಳಲ್ಲಿ ಜಪಿಸಬಹುದು. ತುಳಸಿ ಹಾರವನ್ನು ಕುತ್ತಿಗೆಯಲ್ಲಿ ಧರಿಸಿ ಆಹಾರವನ್ನು ಸೇವಿಸುವುದರಿಂದ ಅಶ್ವಮೇಧ ಯಾಗದ ಫಲ ದೊರೆಯುತ್ತದೆ ಎಂದು ಪದ್ಮಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಕುತ್ತಿಗೆಯಲ್ಲಿ ತುಳಸಿ ಹಾರವನ್ನು ಧರಿಸಿ ಸ್ನಾನ ಮಾಡುವುದರಿಂದ ಎಲ್ಲಾ ತೀರ್ಥಯಾತ್ರೆಗಳಲ್ಲಿ ಸ್ನಾನ ಮಾಡಿದ ಫಲ ದೊರೆಯುತ್ತದೆ. ಸಾವಿನ ಸಂದರ್ಭದಲ್ಲಿ ವ್ಯಕ್ತಿಯು ತುಳಸಿ ಹಾರವನ್ನು ಕುತ್ತಿಗೆಯಲ್ಲಿ ಧರಿಸಿದ್ದರೆ ಆತನಿಗೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯಿದೆ.
3.ಶಿವರಾದನೆಯಲ್ಲಿ ರುದ್ರಾಕ್ಷಿ ಮಾಲೆಯನ್ನು ಕೈಯಲ್ಲಿ ಹಿಡಿದು ಆರಾಧಿಸುವುದರಿಂದ ಪರಶಿವನು ಪ್ರಸನ್ನನಾಗುತ್ತಾನೆ. ರುದ್ರಾಕ್ಷಿಯನ್ನು ಶಿವನ ಒಂದು ಅಂಶವೆಂದು ಹಿಂದೂ ಧರ್ಮದಲ್ಲಿ ಪರಿಗಣಿಸಲಾಗುತ್ತದೆ. ಹಾಗೂ ರುದ್ರಾಕ್ಷಿಯ ಉದ್ಭವಕ್ಕೆ ಪರಶಿವನೇ ಕಾರಣ ಎಂದು ಹೇಳಲಾಗುತ್ತದೆ. ಆದಕಾರಣ ಶಿವನಿಗೆ ರುದ್ರಾಕ್ಷಿಗೆ ಅಷ್ಟೊಂದು ಪ್ರತ್ಯೇಕತೆ ಇದೆ .
4.ಕೆಂಪು ಚಂದನದ ಹಾರವನ್ನು ಮತ್ತು ಕಮಲ ಬೀಜದ ಮಾಲೆಯನ್ನು ಲಕ್ಷ್ಮೀ ಪೂಜೆ ಮತ್ತು ದುರ್ಗಾ ಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಲಕ್ಷ್ಮೀ ದೇವಿಯನ್ನು ಹಾಗೂ ದುರ್ಗಾ ದೇವಿಯನ್ನು ಒಲಿಸಿಕೊಳ್ಳಲು ಕೆಂಪು ಚಂದನದ ಹಾರವನ್ನು ಬಳಸಬೇಕು. ಕೆಂಪು ಚಂದನದ ಮಾಲೆಯಿಂದ ಮತ್ತು ಕಮಲ ಬೀಜದ ಮಾಲೆಯಿಂದ ದುರ್ಗೆಯನ್ನು ಮತ್ತು ಲಕ್ಷ್ಮಿಯನ್ನು ಜಪಿಸಿದರೆ ಸಿರಿ, ಸಂಪತ್ತು, ಸಂತೋಷ, ಸೌಭಾಗ್ಯ ಮನೆಯಲ್ಲಿ ನೆಲೆಯಾಗುತ್ತದೆ.
5.ಸ್ಪಟಿಕ ಮಾಲೆ ಸ್ಪಟಿಕ ಮಾಲೆಯನ್ನು ತಾಂತ್ರಿಕತೆಗೆ ಹೆಚ್ಚಾಗಿ ಬಳಸುತ್ತಾರೆ. ಸ್ಪಟಿಕ ಮಾಲೆ ಧರಿಸುವುದರಿಂದ ನಮ್ಮೊಳಗಿನ ಶಕ್ತಿಯು ಜಾಗೃತಗೊಳ್ಳುತ್ತದೆ. ಸ್ಪಟಿಕ ಮಾಲೆಯು ಅತ್ಯಂತ ಶಕ್ತಿಯುತ ಮಾಲೆ, ಈ ಮಾಲೆಯನ್ನು ಹಿಂದೂ ಧರ್ಮದಲ್ಲಿ ಲಕ್ಷ್ಮೀ ದೇವಿಯೆಂದು ಪರಿಗಣಿಸಲಾಗುತ್ತದೆ. ಸ್ಪಟಿಕ ಮಾಲೆಯು ನಮ್ಮ ಸುತ್ತಲಿನ ನಕಾರಾತ್ಮಕ ಶಕ್ತಿಯನ್ನು ದೂರಾಮಾಡಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೂ ಮಾನಸಿಕ, ದೈಹಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಸ್ಪಟಿಕ ಮಾಲೆಯನ್ನು ಧರಿಸಿ ಜಪ ಮಾಡುವುದರಿಂದ ನಮ್ಮ ಏಕಾಗ್ರತೆಯು ಹೆಚ್ಚಾಗುತ್ತದೆ, ಕೋಪ ನಿಯಂತ್ರಣಕ್ಕೆ ಬರುತ್ತದೆ. ಪ್ರತಿನಿತ್ಯ ಜಪಮಾಲೆಯನ್ನು ಹಿಡಿದು, ಮಂತ್ರ ಪಠಿಸಿದರೆ ಇದರಿಂದ ಆ ಮನುಷ್ಯನ ಏಕಾಗ್ರತೆ ಹೆಚ್ಚಾಗುತ್ತದೆ. ಅದರಲ್ಲೂ ಸ್ಪಟಿಕ ಜಪಮಾಲೆಯನ್ನು ಹಿಡಿದು, ದೇವರನ್ನು ಆರಾಧಿಸುವುದರಿಂದ ನಮ್ಮ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತವೆ. ವಿಶೇಷ ಮಂತ್ರ ಅಥವಾ ಸ್ತೋತ್ರದ ಮೂಲಕ ಈ ಮಾಲೆಯನ್ನು ಧರಿಸಿದರೆ ಸಾಕಷ್ಟು ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.