Saturday, July 27, 2024

Latest Posts

ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

- Advertisement -

Hubli News: ಹುಬ್ಬಳ್ಳಿ: ನೇಹಾಳ ಪ್ರಕರಣ ಅತ್ಯಂತ ಕೆಟ್ಟ ಪ್ರಕರಣವಾಗಿದೆ. ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ನೇಹಾಳ ಕೊಲೆಯ ನಂತರ ಇನ್ನೊಂದು ಈ ತರಹದ ಘಟನೆ ರಾಜ್ಯದಲ್ಲಿ ನಡೆಯಬಾರದು ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ನೇಹಾಳ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಗಂಭೀರವಾಗಿದೆ. ಚೂರಿ ಇರಿದು ಹತ್ಯೆ ಮಾಡಲಾಗಿದೆ. ಲವ್ ಜಿಹಾದ್ ಪ್ರಕರಣದಿಂದ ಪೋಷಕರಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಆದರೆ ರಾಜ್ಯದ ಸಿಎಂ, ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ದುಷ್ಕರ್ಮಿಗಳು ಪ್ರೇರಣೆ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಆದರೆ ಯಾವುದು ಲಾಜಿಕಲ್ ಅಂತ್ಯಕ್ಕೆ ಹೋಗಿಲ್ಲ. ಈ ಪ್ರಕರಣ ಹೋಗಬೇಕು. ಲವ್ ಜಿಹಾದ್ ಎಂದರೆ ಏನೂ? ಎಂಬುದು ಎಲ್ಲರಿಗೂ ಗೊತ್ತಾಗಬೇಕು ಎಂದರು.

ಹತ್ಯೆಯ ವಿಡಿಯೋವನ್ನು ಇದೀಗ ಪೋಷಕರು ಜೀವನ ಪರ್ಯಂತ ನೋಡಬೇಕಿದೆ. ಇದು ದುರಂತಕಾರಿ ಸಂಗತಿಯಾಗಿದೆ. ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸಿದರೇ ಎನ್ ಕೌಂಟರ್ ಮಾಡುವ ವಾತಾವರಣ ನಿರ್ಮಿಸಿದ್ದಾರೆ. ಕೆಲವರನ್ನು ಎನ್ ಕೌಂಟರ್ ಮಾಡಿದ್ದಾರೆ. ಇದೀಗ ಅಲ್ಲಿ ಪರಿಪೂರ್ಣವಾಗಿ ಹೆಣ್ಣು ಮಕ್ಕಳು ಯಾವುದೇ ಅಂಜಿಕೆಯಿಲ್ಲದೇ ಬದುಕು ನಡೆಸುತ್ತಿದ್ದಾರೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಆಗಬೇಕೆಂದು ಒತ್ತಾಯಿಸಿದರು.

ನೇಹಾಳ ಹತ್ಯೆಯನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಸ್ವಾಮೀಜಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದನ್ನು ಒಪ್ಪಿಕೊಳ್ಳುತ್ತೇನೆ. ರಾಜ್ಯದ ಸಿಎಂ ಕೆಳಮಟ್ಟದ ಹೇಳಿಕೆ ನೀಡಿದ್ದಾರೆ. ಅದಕ್ಕೆ ಬೇರೆಯವರು ಅದಕ್ಕೂ ಕೆಳಮಟ್ಟದಲ್ಲಿ ಹೇಳಿಕೆ ನೀಡಿದರೇ ಇದು ರಾಜಕೀಯ ಅನಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ

ಆರೋಪಿಯ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ: ಸಂಸದೆ ಸುಮಲತಾ ಅಂಬರೀಷ್

- Advertisement -

Latest Posts

Don't Miss