Sunday, February 9, 2025

Latest Posts

Uttara Kannada News: ಉತ್ತರಕನ್ನಡದ ಯಲ್ಲಾಪುರದಲ್ಲಿ ರಸ್ತೆ ಅಪಘಾತ: 10 ಮಂದಿ ದುರ್ಮರಣ

- Advertisement -

Yallapura News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ.

ಈ ಲಾರಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದು, ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದರು. ಭಾರ ತಾಳಲಾರದೇ ಲಾರಿ ಪಲ್ಟಿ ಯಾಗಿದ್ದು, 10 ಮಂದಿ ಸಾಾವನ್ನಪ್ಪಿದ್ದು, ಕೆಲವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉಳಿದವರು ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೃತಪಟ್ಟವರೆಲ್ಲರೂ ಹಾವೇರಿಯ ಸವಣೂರು ಮೂಲದವರು ಎನ್ನಲಾಗಿದೆ. ಸ್ಥಳದಲ್ಲೇ ಮೃತಪಟ್ಟವರ ಹೆಣವನ್ನು ಕ್ರೇನ್‌ ಮೂಲಕ ಎತ್ತಲಾಾಯಿತು.

ಸ್ಥಳಕ್ಕೆ ಯಲ್ಲಾಪುರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಸೇರಿ, ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

- Advertisement -

Latest Posts

Don't Miss