Uttara Kannada News: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹ*ತ್ಯೆ

Uttara Kannada News: ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಇಂದು ಸಂಜೆ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯ ಬಟ್ಟೆ ಒಣಗಿಸುವ ಕೋಣೆಯಲ್ಲಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವಿದ್ಯಾರ್ಥಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಹುತಗಾರ ನಿವಾಸಿ ಎಂದು ತಿಳಿದು ಬಂದಿದೆ.ವಿದ್ಯಾರ್ಥಿಯ ಪೋಷಕರು ಆಗಮಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎಂದು ತನಿಖೆಯಿಂದ ತಿಳಿಯಬೇಕಿದೆ.

About The Author