www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ.
ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಈ ನಡುವೆ ಹಲವಾರು ಮಂದಿ ಇನ್ನೂ ಕೂಡಾ ಅವಶೇಷಗಳಡಿಯಲ್ಲಿ ಹಾಗೂ ಪ್ರವಾಹ ಪೀಡಿತ ಪ್ರದೇಶದಲ್ಲಿ ಇದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, “ಉತ್ತರಾಖಂಡದ ಪರಿಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡಲಾಗಿದೆ,” ಎಂದು ಈಗಾಗಲೇ ತಿಳಿಸಿದ್ದಾರೆ. ಹಾಗೆಯೇ ಇಂದು ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದಾರೆ.