ರಾಜ್ಯ ಸುದ್ದಿಗಳು: ಇಂದು ಕೇವಲ ಲಸಿಕೆ ಹಾಕಲು ಕ್ಷೇತ್ರಕ್ಕೆ ಬಂದಿಲ್ಲ, ಜನರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ನಮ್ಮ ಮನಸ್ಸು, ವಿಚಾರಕ್ಕೆ ಶಕ್ತಿ ಬರಬೇಕು ಎಂದರೆ ಆರೋಗ್ಯ ಚೆನ್ನಾಗಿರಬೇಕು. ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ಉತ್ತಮವಾಗಿರಬೇಕು. ಈ ಉದ್ದೇಶದಿಂದ ಸರ್ಕಾರ ಐದುವರ್ಷದ ಮಗುವಿನವರೆಗೂ ಸರ್ಕಾರ ಉಚಿತ ಲಸಿಕೆ ನೀಡುತ್ತಾ ಬಂದಿದೆ. ರಾಜ್ಯದುದ್ದಗಲ ಈ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಸಾಕೇತಿಕವಾಗಿ ಉದ್ಘಾಟನೆ ಮಾಡಿದ್ದೇನೆ.
ಈ ಕ್ಷೇತ್ರದ ಶಾಸಕರು ಇಲ್ಲಿನ ಸಮಸ್ಯೆಗಳನ್ನು ನನ್ನ ಮುಂದೆ ಇಟ್ಟಿದ್ದಾರೆ. ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ ಶಾಂತಿನಗರ ಕ್ಷೇತ್ರವೂ ಅಷ್ಟೇ ಮುಖ್ಯ. ಆರೋಗ್ಯ, ಸಮುದಾಯ ಭವನ ವಿಚಾರವನ್ನು ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಮಂಗಳವಾರ ಬೆಂಗಳೂರು ನಗರದ ಅಭಿವೃದ್ದಿಯ ವಿಚಾರವಾಗಿ ಸಭೆ ಕರೆದಿದ್ದು, ಅದಕ್ಕೆ ಮುಂಚಿತವಾಗಿ ಒಂದು ಪೂರ್ವಭಾವಿ ಸಭೆ ನಡೆಸಿ ಬೆಂಗಳೂರಿನ ಅಭಿವೃದ್ದಿಗೆ ಏನು ಬೇಕು ಎನ್ನುವ ಕುರಿತು ಚರ್ಚೆ ನಡೆಸಿ ಅದನ್ನು ಮುಖ್ಯಮಂತ್ರಿಗಳ ಮುಂದೆ ಮಂಡಿಸಲಿದ್ದೇವೆ. ನಿಮ್ಮ ಭಾವನೆ ಹಾಗೂ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಕಾರ್ಯಕತರ ಜವಾಬ್ದಾರಿ. ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪದವರಿಗೆ ಜನರೇ ಮುಂದೆ ನಿಂತು ಯೋಜನೆ ತಲುಪುವಂತೆ ಮಾಡಬೇಕು, ಯಾರಿಗೂ ಕಮಿಷನ್ ಕೊಡುವಂತಿಲ್ಲ, ಲಂಚ ನೀಡುವಂತಿಲ್ಲ.
ಮಹಿಳೆಯರಿಗೆ ಅನುಕೂಲ ಮಾಡಿಕೊಡಲು ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಹೆಣ್ಣು ಮಕ್ಕಳು ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಓಡಾಡುತ್ತಿದ್ದೀರಿ, ಒಬ್ಬರೇ ಓಡಾಡಬೇಡಿ ನಿಮ್ಮ ಗಂಡಂದಿರನ್ನು ಕರೆದುಕೊಂಡು ಹೋಗಿ, ಅವರು ಓಡಾಡಲಿ. 10 ಕೆ.ಜಿ ಅಕ್ಕಿ ನೀಡುತ್ತಿದ್ದೇವೆ. ಈ ತಿಂಗಳಿನಿಂದ 200 ಯೂನಿಟ್ ವರೆಗೂ ನೀವು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ನೀವು ಶಾಸಕರ ಜತೆ ಸೇರಿಕೊಂಡು ನೀವು ವಾರ್ಡ್ ಮಟ್ಟದಲ್ಲಿ ಸಭೆ ಮಾಡಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಮಾಡಬೇಕು.
DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:
Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Advertisement: ಆರೋ ಜಾಹಿರಾತಿನಲ್ಲಿ ನಿರ್ದೇಶಕನ ಪಾತ್ರದಲ್ಲಿ ಹೃತಿಕ್ ರೋಷನ್

