Hubli News: ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದ ವಾರ್ತಾ ಇಲಾಖೆಯಿಂದ ಕೊಡಮಾಡುವ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡುವ ಆಯ್ಕೆ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಆಯ್ಕೆಯಾಗಿದ್ದಾರೆ. ಮಹಾನ ಸಾಧಕರ ಪ್ರಶಸ್ತಿಯನ್ನು ಅರ್ಹರನ್ನು ಆಯ್ಕೆ ಮಾಡುವ ಸಮಿತಿಗೆ ಆಯ್ಕೆಯಾಗಿರುವುದು ಹುಬ್ಬಳ್ಳಿಗೆ ಹೆಮ್ಮೆಯ ಸಂಗತಿಯಾಗಿದೆ.
ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ‘ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ’ಗೆ ಅರ್ಹರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಾರ್ತಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಆದೇಶ ಹೊರಡಿಸಿದ್ದು, ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅಧ್ಯಕ್ಷತೆಯ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು, ಕ.ಮ.ರವಿಶಂಕರ್, ಎಂ.ಸಿ.ಶೋಭಾ, ಜೆ.ಅಬ್ಬಾಸ್ ಮುಲ್ಲಾ, ಎನ್.ರವಿಕುಮಾರ್ (ಟೆಲೆಕ್ಸ್), ವಾರ್ತಾ ಇಲಾಖೆ ಆಯುಕ್ತರು ಹಾಗೂ ಜಂಟಿ ನಿರ್ದೇಶಕರು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ.