Wednesday, December 18, 2024

Latest Posts

ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಹತ್ಯೆ ಪ್ರಕರಣ: ಆರೋಪಿ ಬಂಧನ.

- Advertisement -

Hubli News: ಹುಬ್ಬಳ್ಳಿ: ನಗರದ ಎಪಿಎಂಸಿಯಲ್ಲಿರುವ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಮಹಾದೇವಪ್ಪ ಹೊನ್ನಳ್ಳಿ (ದೇವಪ್ಪಜ್ಜಾ) ಹತ್ಯೆ ಪ್ರಕರಧ ಸಂಬಂಧಿಸಿದಂತೆ ಹತ್ಯೆಗೈದ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹುಧಾ ಮಹಾನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕಮರಿಪೇಟ್ ನ ನಿವಾಸಿಯಾದ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಎಂಬ ಆರೋಪಿಯನ್ನು ನಗರದ ಚೆನ್ನಮ್ಮ ವೃತ್ತದಲ್ಲಿ ಬಂಧಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿಯನ್ನು ಹತ್ಯೆ ಮಾಡಿದ್ದು, ಆರೋಪಿಯ ಕೆಲ ಸಂಬಂಧಿಕರು ಕೊಲೆಯಾದ ವ್ಯಕ್ತಿಯೊಂದಿಗೆ ಸೇರಿಕೊಂಡು ಆರೋಪಿತನಿಗೆ ಹಾಗೂ ಆತನ ಕುಟುಂಬದವರಿಗೆ ಕೆಲವು ಪೂಜೆಗಳನ್ನು ಮಾಡಿಸಿದ್ದು, ಅದರಿಂದಾಗಿ ಕುಟುಂಬದವರಿಗೆ ಮತ್ತು ಸಂಬಂಧಿಕರ ಆರೋಗ್ಯ ಏರುಪೇರಾಗಿ ಕೆಲವರು ಮೃತಪಟ್ಟಿರುತ್ತಾರೆ. ಇದರಿಂದ ಹತ್ಯೆಯಾದ ದೇವೇಂದ್ರಪ್ಪ (ದೇವಪ್ಪಜ್ಜಾ) ನೇ ಕಾರಣವೆಂದು ಭಾವಿಸಿ ಕೊಲೆ ಮಾಡಿದ್ದಾನೆ.‌

ಈ ಹಿಂದೆಯು ದೇವೇಂದ್ರಪ್ಪನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 2022 ರಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲ ದಾಖಲಾಗಿದ್ದ ಪ್ರಕರಣದ ಕೃತ್ಯವೂ ಸಹ ತಾನೇ ಮಾಡಿರುವುದಾಗಿ ಆರೋಪಿತನು ಒಪ್ಪಿಕೊಂಡಿದ್ದಾನೆಂದು ತಿಳಿಸಿದರು.‌ ಇನ್ನೂ ಆರೋಪಿಯು ಕಳೆದ ಆರುವರೆ ವರ್ಷದಿಂದ ಕೊಲೆ ಮಾಡಬೇಕೆಂದು ನಿರ್ಧಾರ ಮಾಡಿದ್ದಾ ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಆರೋಪಿಯ ಬಂಧನಕ್ಕಾಗಿ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧನ ಮಾಡಿದ್ದು, 180 ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಪರಿಶೀಲಿಸಿ ಆರೋಪಿಯ ಗುರುತು ಪತ್ತೆ ಹಚ್ಚಿ, ಸಂಶಯಾಸ್ಪದ ವ್ಯಕ್ತಿಯ ಮಾಹಿತಿ ನೀಡುವಂತೆ ಮನವಿ ಮಾಡಿದ್ದೇವು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಚೆನ್ನಮ್ಮ ಸರ್ಕಲ್ ಸುತ್ತಮುತ್ತಲಿನಲ್ಲಿ ಆರೋಪಿ ಓಡಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದರು.

ಆರೋಪಿಯನ್ನು ಬಂಧನ ಮಾಡುವಲ್ಲಿ ಡಿಸಿಪಿ ಮಹಾನಿಂಗ ನಂದಗಾವಿ, ಅಪರಾಧ ವಿಭಾಗದ ಡಿಸಿಪಿ ರವೀಶ್ ಎಸ್, ನವನಗರ ಠಾಣೆಯ ಇನ್ಸ್ಪೆಕ್ಟರ್ ಸಮ್ಮಿವುಲ್ಲಾ ಹಾಗೂ ಸಿಬ್ಬಂದಿಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಿದ್ದು, ತ್ವರಿತ ಕಾರ್ಯವನ್ನು ಪ್ರಶಂಸಿಸಿ 50 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು.

- Advertisement -

Latest Posts

Don't Miss