Saturday, July 27, 2024

Latest Posts

ವಸಂತ್ ಬಂಗೇರಾ ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political News: ಕಾಂಗ್ರೆಸ್ ಮಾಜಿ ಶಾಸಕ ದಿವಂಗತ ವಸಂತ್ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ. ಸತ್ಯ, ಬಡವರ ಪರ ಕಾಳಜಿ, ರಾಜಿರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದು ಸಿಎಂ ಹೇಳಿದರು.

ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವಮಾನವ ಮೌಲ್ಯವನ್ನು ಪಾಲಿಸಿದರು. ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು. 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು. ಅವರು ಇಂದು ನಮ್ಮೊಂದಿಗಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿ. ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಬಡವಾಗಿದೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿದ್ದಾರೆ, ಒಬ್ಬ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡ ದುಃಖ ನನ್ನದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಸಂತ ಬಂಗೇರ ಅವರು ಮರೆಯಾದರೂ ಅವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಮಾನಸದಲ್ಲಿದ್ದಾರೆ. ಸದಾಕಾಲ ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿ, ಜನರ ಹಿತದ ಬಗ್ಗೆಯೇ ಯೋಚಿಸುತ್ತಿದ್ದ ಬಂಗೇರ ಅವರದು ಅಪರೂಪದ ವ್ಯಕ್ತಿತ್ವ. ನಿಸ್ವಾರ್ಥ ನಾಯಕ ಬಂಗೇರ ಅವರ ನೆನಪಿಗಾಗಿ ಬೆಳ್ತಂಗಡಿ ಬಸ್ಟಾಂಡ್ ಗೆ ಅವರ ಹೆಸರಿಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಸರ್ಕಲ್‌ನಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ನಾನು ಮುಕ್ತವಾಗಿದ್ದೇನೆ. ಇದು ಬಂಗೇರ ಅವರ ಜೀವನ ಸಾಧನೆಯನ್ನು ಗೌರವಿಸಲು ನನಗೆ ದೊರೆತ ಅವಕಾಶ ಎಂದು ಭಾವಿಸಿದ್ದೇನೆ .

Anjali Case: ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

- Advertisement -

Latest Posts

Don't Miss