Sunday, September 8, 2024

Latest Posts

C M Bommai ಮನವಿಗೆ ಕರ್ನಾಟಕ ಬಂದ್ ವಾಪಸ್ ಪಡೆದ ವಾಟಾಳ್..!

- Advertisement -

ಬೆಂಗಳೂರು : ಎಂಇಎಸ್ (MES)​ ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ​ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್​ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಆದರೆ, ಇಂದು ಫೋನ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Bommai) ಜನರಿಗೆ ತೊಂದರೆ ಯಾಗುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಮನವಿ ಮಾಡಿದ್ದರು. ಅಲ್ಲದೆ, ತಮ್ಮ ಕಚೇರಿಗೆ ಬಂದು ಭೇಟಿ ನೀಡುವಂತೆಯೂ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿರುವ ವಾಟಾಳ್ ನಾಗರಾಜ್ ಕರ್ನಾಟಕ ಬಂದ್​ ಹಿಂಪಡೆಯುವುದಾಗಿ ಘೋಷಿಸಿದ್ದಾರೆ.

ಸಿಎಂ ಭೇಟಿ ಬಳಿಕ ಮಾತನಾಡಿರುವ ವಾಟಾಳ್​ ನಾಗರಾಜ್​, ನಾಳೆಯ ಕರ್ನಾಟಕ ಬಂದ್​ ಮುಂದೂಡಲು ನಿರ್ಧಾರ ಮಾಡಲಾಗಿದೆ. ಎಂಇಎಸ್​ ಸಂಘಟನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ ಹಿನ್ನೆಲೆ ಬಂದ್​ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ನಾಳೆ ಬಂದ್ ಇಲ್ಲ, ಆದರೆ, ಜನವರಿಯಲ್ಲಿ ಕರ್ನಾಟಕ ಬಂದ್ ಮಾಡುತ್ತೇವೆ.  ಮುಖ್ಯಮಂತ್ರಿಯವರು ಎರಡು ಬಾರಿ ಮನವಿ ಮಾಡಿ ನಮ್ಮನ್ನು ಕರೆಸಿದ್ದರು. ಕಾನೂನು ಪ್ರಕಾರ ಎಂಇಎಸ್ ನಿಷೇಧಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡ್ತೀನಿ. ಬಂದ್ ಕರೆ ಹಿಂದೆ ಪಡೀರಿ ಅಂತ ಮುಖ್ಯಮಂತ್ರಿ ಹೇಳಿದರು. ಅವರ ಮಾತಿಗೆ ಗೌರವ ಕೊಟ್ಟು, ನಾವು ತೀರ್ಮಾನ ತೆಗೆದುಕೊಂಡೆವು.

ನಾಳೆ ಬಂದ್ ಮಾಡಿದ್ರೆ ಹೊಸವರ್ಷಾಚರಣೆಗೆ ತೊಂದರೆ ಆಗುತ್ತೆ ಅಂತ ಹೇಳಿದ್ರು. ಚಲನಚಿತ್ರ ವಾಣಿಜ್ಯ ಮಂಡಳಿ (Film Chamber of Commerce) ಯವರು ಮೂರು ಚಿತ್ರ ಬಿಡುಗಡೆ ಆಗುತ್ತೆ, ನಾವು ನಿಮ್ಮ ಜೊತೆ ಇದ್ದೀನಿ. ಬಂದ್ ಮಾಡಬೇಡಿ’ ಅಂತ ಮುಖ್ಯಮಂತ್ರಿಗಳು ಪ್ರೀತಿ ಮತ್ತು ಅಭಿಮಾನದಿಂದ ಹೇಳಿದರು. ಯಾರ ಮಾತಿಗೂ ತಲೆ ಕೆಡಿಸಿಕೊಂಡಿರಲಿಲ್ಲ. ಇವತ್ತು ಬೆಳಿಗ್ಗೆಯಿಂದಲೂ ನಮ್ಮ ಒಕ್ಕೂಟದವರು ಬಂದ್ ಬೇಡ ಅಂತ ಒತ್ತಡ ತಂದಿದ್ರು. ಅವರ ಮಾತಿಗೂ ಬೆಲೆ ಕೊಡಬೇಕಾಯಿತು, ಮುಖ್ಯಮಂತ್ರಿಗಳ ಮಾತಿಗೂ ಬೆಲೆ ಕೊಡಬೇಕಾಯಿತು. ಹೀಗಾಗಿ ನಾಳೆ ನಡೆಯಬೇಕಾದ ಬಂದ್ ನಡೆಯುವುದಿಲ್ಲ. ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟು ಬಂದ್ ಹಿಂದೆ ಪಡೆದಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

- Advertisement -

Latest Posts

Don't Miss