National News : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18 ರಂದು ಪೋರ್ಟ್ ಬ್ಲೇರ್ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸುಮಾರು 40,800 ಚದರ ಮೀಟರ್ನ ಒಟ್ಟು ನಿರ್ಮಾಣ ಪ್ರದೇಶದೊಂದಿಗೆ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕವಾಗಿ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.
ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್ಬಸ್-321 ಮಾದರಿಯ ವಿಮಾನಗಳಿಗೆ ಸೂಕ್ತವಾದ ಅಪ್ರಾನ್ ಅನ್ನು ಸಹ ನಿರ್ಮಿಸಲಾಗಿದೆ, ಇದರಿಂದಾಗಿ ವಿಮಾನ ನಿಲ್ದಾಣವು ಈಗ ಏಕಕಾಲದಲ್ಲಿ ಹತ್ತು ವಿಮಾನಗಳ ನಿಲುಗಡೆಗೆ ಸೂಕ್ತವಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಇದೊಂದು ಉತ್ತಮ ಉಪಕ್ರಮ ಎಂಬುವುದಾಗಿ ಹೇಳಲಾಗಿದೆ.
Vande bharath Express:ರೈಲಿನಲ್ಲಿ ಅಗ್ನಿ ಅವಘಡ. ದುರಂತದಿಂದ ಪರಾದ ಪ್ರಯಾಣಿಕರು..!




