www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕರವೇ ಮುಖಂಡ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಆರ್ ಪಿಡಿ ವೃತ್ತದಲ್ಲಿ ವೀರಮದಕರಿ ಪುತ್ಥಳಿ ಕುರಿಸಬೇಕು ಎನ್ನುವುದು ಬೇಡಿಕೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ಕೊಟ್ಟಿದ್ದಾರೆ. ಆದ್ರೆ, ಈವರೆಗೂ ಯಾರು ಕೂಡ ಆ ಕೆಲಸ ಮಾಡಿಲ್ಲ.
ಇದರಿಂದ ಕನ್ನಡಪರ ಹೋರಾಟಗಾರರು ಹಾಗೂ ವೀರ ಮದಕರಿ ಅಭಿಮಾನಿಗಳು ನಾಮಪಲಕ ಕೂರಿಸಲು ಹೋದಾಗ ಅಲ್ಲಿನ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಮನಬಂದಂತೆ ಥಳಿಸಿದ್ದಲ್ಲದೇ 30ಕ್ಕೂ ಹೆಚ್ಚು ಯುವಕರನ್ನು ಬಂಧನ ಮಾಡಿದ್ದಾರೆ. ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ