Political News : ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷೀಯರ ದುರ್ವರ್ತನೆಗೆ 10 ಮಂದಿ ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಈ ವಿಪಕ್ಷ ನಾಯಕರ ದುರ್ವರ್ತನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ ನಂಬಿಕೆ. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ.ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆಯುತ್ತಿರುವ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BasanaGouda Patil Yathnal : ಪ್ರತಿಭಟನೆ ವೇಳೆ ಯತ್ನಾಳ್ ಆಸ್ಪತ್ರೆಗೆ ದಾಖಲು
VidhanaSoudha: ಕಲಾಪದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿ ನಾಯಕರು ಅಮಾನತು