ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news :

ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ನಾಗಠಾಣದ ವಾರ್ಡ್‌ ನಂ.10 ರಲ್ಲಿ ಫಲಾನುಭವಿಗಳ ಕಾರ್ಯಕ್ರಮ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಸಚಿವರಾದ ಡಾ.ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ, ಮಾಜಿ ವಿಪ ಸದಸ್ಯ ಸಿದ್ದರಾಜು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಿಂದಗಿಯಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, ಇಂಡಿ, ನಾಗಠಾಣ, ದೇವರಹಿಪ್ಪರಗಿ ಮತ್ತು ಸಿಂದಗಿ ಕ್ಷೇತ್ರಗಳಿಂದ ಸರಿಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ.

PSI ಕಿಂಗ್ ಪಿನ್ ಮನೆ ಮೇಲೆ ದಾಳಿ..!

“ನನ್ನ ಕಂಡರೆ ಮೋದಿಗೆ ಭಯವಿದೆ..!”:ಸಿದ್ದರಾಮಯ್ಯ

ಮಂಡ್ಯ: ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

About The Author