Saturday, July 12, 2025

Latest Posts

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

- Advertisement -

Vijayanagara  News:

ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ.

ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ (25), 3 ತಿಂಗಳ ಮಗು ಹಾಗೂ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಇದೇ ಕುಟುಂಬದ ಉಮೇಶ ಕಲಶೆಟ್ಟಿ ಮತ್ತು ಅವರ ಪತ್ನಿ ಸುರೇಖಾ ಕಲಶೆಟ್ಟಿ, ಮಕ್ಕಳಾದ 8 ತಿಂಗಳ ಮಗು ಸುಮನ್ ಹಾಗೂ 2 ವರ್ಷದ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅವರನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

ಉಜಿರೆ: ಬೆಂಕಿ ಅವಘಡಕ್ಕೆ ಟಯರ್ ಅಂಗಡಿ ಧಗಧಗ…!

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ

- Advertisement -

Latest Posts

Don't Miss