Vijayapura News:
ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಕಾಂಗ್ರೆಸ್ ಕಚೇರಿಗೆ ಅಂಟಿಸಿದ್ದ ಸಾವರ್ಕರ್ ಫೋಟೊವನ್ನು ಪೊಲೀಸರು ತೆರವುಗೊಳಿಸಿ, ಪ್ರತಿಭಟನಾನಿರತರ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.
ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?
ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ