Friday, October 17, 2025

Latest Posts

‘ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ’

- Advertisement -

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ, ಗೃಹ ಸಚಿವ ಶ್ರೀ ಅಮಿತ್ ಷಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್.ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದಿದ್ದಾರೆ. 

ಇನ್ನು ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದಕ್ಕೆ, ಮಾಜಿ ಸಿಎಂ ಕುಮಾರಸ್ವಾಮಿ, ಸುಮಲತಾ ಅಂಬರೀಷ್, ಸದಾನಂದಗೌಡ ಸೇರಿ ಹಲವು ಬಿಜೆಪಿ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..

‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’

‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

- Advertisement -

Latest Posts

Don't Miss