ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು ನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ ವಿಕ್ರಾಂತ್ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.
ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ ವಿಕ್ರಾಂತ್ ರೋಣ ಸಿನಿಮಾವನ್ನು 2022ರ ಫೆಬ್ರವರಿ 24ರಂದು ರಿಲೀಸ್ ಮಾಡಲಾಗುತ್ತಿದೆ. 37 ಸೆಕೆಂಡ್ಗಳ ಟೀಸರ್ ವಿಡಿಯೋ ರಿಲೀಸ್ ಮಾಡುವ ಮೂಲಕ ಡೇಟ್ ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ 3ಡಿ ಯಲ್ಲಿ ನೀವು ವಿಕ್ರಾಂತ್ ರೋಣ ಆಬ್ಬರವನ್ನು ಕಣ್ತುಂಬುಕೊಳ್ಳಬಹುದು. ಜೊತೆಗೆ ಸುದೀಪ್ ಬೈಕ್ ಮೇಲೆ ಕುಳಿತಿರುವ ಫೋಟೋ ಕೂಡ ಈ ವಿಡಿಯೋದಲ್ಲಿದೆ. ಇನ್ನೂ ವಿಕ್ರಾಂತ್ ರೋಣ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಒಂದೇ ದಿನ ಬಿಡುಗಡೆಯಾಗುತ್ತಿದೆ. ಕೇವಲ ಈ 30 ಸೆಕೆಂಡ್ ವಿಡಿಯೋ ನೋಡಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿರುವ ನಿರೀಕ್ಷೆ ಹೆಚ್ಚಾಗುತ್ತಿದೆ.ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಚಿತ್ರೀಕರಣಕ್ಕೆ ಬಂದ ಫೋಟೋಗಳು, ಹಾಗೂ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಫೋಟೋಗಳು ಸಖತ್ ವೈರಲ್ ಆಗಿತ್ತು. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ.