Friday, June 20, 2025

Latest Posts

ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.

- Advertisement -

Mysore News: ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ.

ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರೆ, ಕುಟುಂಬದವರಿಗೆ ತೀವ್ರಗಾಯಗಳಾಗಿದ್ದು, ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಈ ಸಂಬಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಮಣ್ಯ ಭೇಟಿ ನೀಡಿ ಪರಿಶೀಲಿಸಿದರು.

ಅಪಘಾತದ ನಂತರ ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪೊಲೀಸರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರವಿಕುಮಾರ್ ಹುಣಸೂರು, ಕರ್ನಾಟಕ ಟಿವಿ

ಹುಣಸೂರು ಸುದ್ದಿ & ಜಾಹೀರಾತಿಗಾಗಿ ಸಂಪರ್ಕಿಸಿ : 7411125071

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’

- Advertisement -

Latest Posts

Don't Miss