ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು.
ಪಂಚಾಯಿತಿ ಕೇಂದ್ರ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು.
ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಅಡಿ ಗ್ರಾಮಗಳಲ್ಲಿ ಪೈಪ್ಲೈನ್ ಗಳು ಆಗಿವೆ. ಆದರೆ ಈ ಮೂಲಕ ನೀರು ಸರಬರಾಜು ಮಾಡಲು ಅಧಿಕಾರಿಗಳಾಗಲಿ ಗ್ರಾಮ ಪಂಚಾಯತಿಯಾಗಲೀ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ನಾವು ಕುಡಿಯೋ ನೀರಿಗೂ ಪರದಾಡುತ್ತಿದ್ದೇವೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ರು.
ಇನ್ನು ನಮ್ಮ ಗ್ರಾಮದಲ್ಲಿ ಪಂಚಾಯಿತಿ ಇದ್ದು ಗ್ರಾಮ ಪಂಚಾಯಿತಿಗೆ ಮನವಿ ಕೊಟ್ಟರು. ಇದುವರೆಗೆ ಯಾರೂ ಸ್ಪಂದಿಸಿಲ್ಲ ಕೇಂದ್ರ ಸರ್ಕಾರದ ಜಲಜೀವನ್ ಯೋಜನೆಯ ಅಡಿಯಲ್ಲಿ ಎಲ್ಲಾ ಗ್ರಾಮಗಳಿಗೂ 24 ಗಂಟೆ ಕುಡಿಯುವ ನೀರಿನ ಯೋಜನೆ ಜಾರಿಯಲ್ಲಿದೆ. ಆದ್ರೆ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದ್ದು. ನೀರಿನ ಸಮಸ್ಯೆ ಯನ್ನೂ ನೀಗಿಸಲು ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಅಂತ ಪ್ರತಿಭಟನಾ ನಿರತ ಗ್ರಾಮಸ್ಥರು ಒತ್ತಾಯಿಸಿದ್ರು.
ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ