www.karnatakattv.net : ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ಸ್ವಾಗತಿಸಿದ ಆರೋಪದ ಅಡಿಯಲ್ಲಿ 200 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು.. ನೂತನ ಸಚಿವರಿಗೆ ಸ್ವಾಗತಿಸುವ ವೇಳೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಸಂಭ್ರಮಾಚರಣೆ ಮಾಡಿದ 200 ಕಾರ್ಯಕರ್ತರ ವಿರುದ್ಧ ಪ್ರಕರಣ ಸು-ಮೋಟೊ ಪ್ರಕರಣ ದಾಖಲಾಗಿದೆ.
ಎಪಿಎಂಸಿ ಈಶ್ವರ ನಗರದ ಸಂತೋಷ ಹಿರೇಮಠ, ಮಂಜುನಾಥ ಹೆಬಸೂರ, ಕರಣ ದುಂಡಿ, ಆನಂದ ಹಡಪದ, ಮಲ್ಲಿಕಾರ್ಜುನ ಹಿರೇಮಠ, ಹರೀಶ ಹಳ್ಳಿಕೇರಿ, ಶಿವರಾಜ ದೊಡ್ಡಮನಿ, ಕಾರ್ತಿಕ ನಾಯ್ಡು, ನಾಗೇಶ ಕಲ್ಲಪ್ಪ, ಚನ್ನಬಸ್ಸು ಪಾಟೀಲ, ಶರತ ಅಂಗಡಿ ಸೇರಿದಂತೆ 150ರಿಂದ 200 ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.
ಕ್ಯಾಬಿನೇಟ್ ದರ್ಜೆಯ ಸಚಿವರಾದ ಬಳಿಕ ಆ. 7ರಂದು ಬೆಳಗ್ಗೆ 10 ಗಂಟೆಗೆ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದರು. ಈ ವೇಳೆ ನಿಲ್ದಾಣದ ಪ್ರವೇಶ ದ್ವಾರದ ಎದುರು ನೂರಾರು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಗುಂಪು ಸೇರಿದ್ದರು. ಮಾಸ್ಕ್ ಧರಿಸದೇ, ಪರಸ್ಪರ ಅಂತರ ಕಾಯ್ದುಕೊಳ್ಳದೇ ಕೋರೊನಾ ನಿಯಮ ಉಲ್ಲಂಘಿಸಿದ್ದರು. ಈ ಕುರಿತು ಗೋಕುಲ ರೋಡ್ ಪೊಲೀಸರು ಆ.10ರಂದು ಪ್ರಕರಣ ದಾಖಲಿಸಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕರ್ನಾಟಕ ಟಿವಿ ಹುಬ್ಬಳ್ಳಿ