ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್ನಲ್ಲಿ ಇದ್ದಾರೆ.
ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London) ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ ಬದಿಗಳಲ್ಲಿ ಶಾಪಿಂಗ್ ಮಾಡುವ ಫೋಟೋ ಮತ್ತು ವಿಡಿಯೋಗಳು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾನೇ ಇರುತ್ತದೆ. ಇದೀಗ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಆ ವಿಡಿಯೋವನ್ನು ನೋಡಿ ಕೊಹ್ಲಿ ಅಭಿಮಾನಿಗಳು ಇದನ್ನು ಎಲ್ಲಿ ಚಿತ್ರೀಕರಿಸಲಾಗಿದೆ. ಕೊಹ್ಲಿ ಎಲ್ಲಿಗೆ ಹೊರಟಿದ್ದಾರೆ ಎಂದು ತಲೆಗೆ ಹುಳ ಬಿಟ್ಟುಕೊಂಡಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ಹಲವು ದಿನಗಳ ಹಿಂದಿನದ್ದು ಎಂದು ಹೇಳಲಾಗುತ್ತಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ (Virat Kohli) ವ್ಯಕ್ತಿಯೊಬ್ಬರ ಜೊತೆ ರೈಲ್ವೆ ನಿಲ್ದಾಣ (railway station) ದಲ್ಲಿ ಟ್ರೈನ್ಗಾಗಿ ಕಾಯುತ್ತಿದ್ದಾರೆ. ರೈಲು ಬಂದ ತಕ್ಷಣ ವಿರಾಟ್ ಕೊಹ್ಲಿ (Virat Kohli) ಮತ್ತು ಆ ವ್ಯಕ್ತಿ ತೆರಳುವುದನ್ನು ಕಾಣಬಹುದಾಗಿದೆ.