ದಾವಣಗೆರೆ: ಇಂದು ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಪಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಗರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ.
ಅಖಿಲ ಭಾರತ ವಿಶ್ವ ಕರ್ಮ ಪರಿಷತ್, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವ ಕರ್ಮ ಸಮಾಜಗ ವಿವಿಧ ಸಂಘ-ಸಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯ ಶಾಮನೂರು ರಸ್ತೆಯಲ್ಲಿರುವಂತ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಬೃಹತ್ ವಿಶ್ವಕರ್ಮ ಜನಜಾಗೃತಿ ಸಮಾವೇಶ ನಡೆಯಲಿದೆ.
ಈ ಸಮಾವೇಶದಲ್ಲಿ ವಿವಿಧ ಮಠಾಧೀಶರು, ಪೀಠಾಧಿಪತಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಸಾಧಕರಿಗೆ ಪ್ರಶಸ್ತಿ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ.





