Technology News:
ಹೊಸ ವಿಶೇಷತೆಯೊಂದಿಗೆ ಇದೀಗ ವಿವೋ ಹೊಸ ವಿನ್ಯಾಸದ ಮೊಬೈಲ್ ಬಿಡುಗಡೆ ಮಾಡಿದೆ. ವಿವೋ Y75s 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು 60Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಹೊಂದಿದೆ.
ಬೆಲೆ ಮತ್ತು ಲಭ್ಯತೆ: ವಿವೋ Y75s 5G ಸ್ಮಾರ್ಟ್‌ಫೋನ್ ಸದ್ಯ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ CNY 1,899 ಆಗಿದೆ. ಇದರ 12GB RAM + 256GB ಮಾದರಿಯ ಬೆಲೆ ಸುಮಾರು 25,000ರೂ ಆಗಿದೆ. ಈ ಸ್ಮಾರ್ಟ್‌ಫೋನ್ ಕಪ್ಪು ಮತ್ತು ಗ್ರೇಡಿಯಂಟ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಶೀಘ್ರದಲ್ಲೇ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡುವ ಸಾಧ್ಯತೆಯಿದೆ.
ಡಿಸ್‌ಪ್ಲೇ ರಚನೆ : ವಿವೋ Y75s 5G, 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದು 60Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಡಿಸ್‌ಪ್ಲೇ 90.61% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, ವೀಡಿಯೊ ಕರೆಗಳು,ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.
ಕ್ಯಾಮೆರಾ ಸೆಟ್‌ಅಪ್ ಎಷ್ಟು? : ವಿವೋ Y75s 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾ ಸೆಟಪ್ ಫುಲ್ ಹೆಚ್‌ಡಿ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.