ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.. ನೂರಾರು ಜನರ ಪ್ರಜ್ಞೆ ತಪ್ಪಿದ್ದುಅವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವಅಮಿತ್ ಶಾ ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ ಸಂಪರ್ಕದಲ್ಲಿದ್ದು ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ತಿದ್ದಾರೆ. ಈ ನಡುವೆ ಪ್ರಧಾನಿ ತುರ್ತು ಸಭೆ ನಡೆಸಿ ಮುಂದಿನ ಕಾರ್ಯತಂತ್ರದ ಬಗ್ಗೆ ಮಾತುಕತೆ ನಡೆಸಿದ್ದಾರೆ.. ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಸಿಎಂ ಜಗನ್ ಘಟನ ಸ್ಥಳದ ಸ್ವಲ್ಪ ದೂರದಲ್ಲೇ ಬೀಡುಬಿಟ್ಟು ಜನರನ್ನ ಸ್ಥಳಾಂತರಕ್ಕೆ ಮುಂದಾಗಿದ್ದಾರೆ..