ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಶ್ರೀಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ವಿರುದ್ಧ ಒಕ್ಕಲಿಗ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕರು ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ ಹಾಗೂ ಮಠ ದಾರಿ ತಪ್ಪುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದು ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆ ಕುರಿತು ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಿದರೂ, ಒಕ್ಕಲಿಗ ಸಮುದಾಯದ ಮುಖಂಡರು ಇದನ್ನು ಸಮರ್ಪಕ ಕ್ಷಮೆ ಎಂದು ಪರಿಗಣಿಸಿಲ್ಲ. ಕ್ಷಮೆಯಾಚನೆ ಮಾಧ್ಯಮಗಳ ಮುಂದೆ ಮಾಡುವುದರಿಂದ ಸಾಲದು. ಶಾಸಕ ರಮೇಶ್ ಬಾಬು ಅವರು ಸ್ವತಃ ಮಠಕ್ಕೆ ತೆರಳಿ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಎದುರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಶ್ರೀರಂಗಪಟ್ಟಣ ತಾಲ್ಲೂಕಿನ ಒಕ್ಕಲಿಗ ಸಂಘದ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲ್ಲೂಕು ಅಧ್ಯಕ್ಷ ಇಂದ್ರಕುಮಾರ್ ಹಾಗೂ ಮುಖಂಡ ಹರೀಶ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ವರದಿ : ಲಾವಣ್ಯ ಅನಿಗೋಳ




