www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ ಅವರು ಭಯಪಡುತ್ತಾರೆ ಎಂದು ಓವೈಸಿ ಆರೋಪಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುತ್ತಿದ್ದು, ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.84 ರೂಪಾಯಿ ಮತ್ತು ಡೀಸೆಲ್ ಬೆಲೆ 94.57 ರೂಪಾಯಿ ಆಗಿದೆ. ಬಡ ಕಾರ್ಮಿಕರನ್ನು ಉದ್ದೇಶಪೂರಕವಾಗಿ ಹತ್ಯೆಯನ್ನು ಮಾಡಲಾಗುತ್ತಿದ್ದು, ನಾಗರಿಕರ ಮೇಲೆ ನಡೆಯುತ್ತಿರುವ ಸರಣಿ ದಾಳಿ ಮತ್ತು ಹತ್ಯೆಯು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಶನಿವಾರ ಬಿಹಾರ ಮೂಲಕ ಗೋಲ್ ಗಪ್ಪಾ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಮೂಲದ ವಲಸೆ ಕಾರ್ಮಿಕರನ್ನು ಉಗ್ರರು ಕೊಂದು ಹಾಕಿದ್ದಾರೆ. ಭಾನುವಾರ ಬಿಹಾರ ಮೂಲದ ರಾಜಾ ರಿಷಿದೇವ್ ಮತ್ತು ಯೋಗೇಂದ್ರ ರಿಷಿದೇವ್ ಎಂಬ ಇಬ್ಬರು ಕಾರ್ಮಿಕರನ್ನು ಅನಂತನಾಗ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.