Saturday, October 19, 2024

Latest Posts

ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

- Advertisement -

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ.

ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು. ಆದರೆ, ಡಿಸೆಂಬರ್ ತಿಂಗಳ 15ರವರೆಗೆ 825 ಕೋವಿಡ್ ಪ್ರಕರಣ ದಾಖಲಾಗಿದೆ. ಇಷ್ಟೇ ಅಲ್ಲ ಈ ತಿಂಗಳಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ಬಹುತೇಕ ಕೋವಿಡ್ ಪ್ರಕರಣಗಳು ಆಸ್ಪತ್ರೆ ದಾಖಲಾಗಿರುವ ರೋಗಿಗಳಲ್ಲಿ ಪತ್ತೆಯಾಗಿದೆ.

ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗುವ ರೋಗಿಗಳನ್ನು H1N1 ಹಾಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಈ ಪೈಕಿ ಬಹುತೇಕ ರೋಗಿಗಳ H1N1 ನೆಗಟೀವ್ ವರದಿ ಬಂದಿದ್ದರೆ, ಕೋವಿಡ್ ಪಾಸಿಟೀವ್ ಆಗಿದೆ. ಕೋವಿಡ್ ಮೂರು ಅಲೆಗಳ ಬಳಿಕವೂ ಭಾರತದಲ್ಲಿ ಹವಾಮಾನ ಬದಲಾದಂತೆ ಕೋವಿಡ್ ಕಾಣಿಸಿಕೊಂಡಿದೆ. ಈ ಬಾರಿ ಡಿಸೆಂಬರ್ ತಿಂಗಳ ಆರಂಭದಲ್ಲೇ ಕೇರಳದಲ್ಲಿ 2 ಸಾವು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

- Advertisement -

Latest Posts

Don't Miss