Friday, March 29, 2024

Latest Posts

ಇನ್ನು ಮುಂದೆ ವಾಟ್ಸ್ಯಾಪ್ ನಲ್ಲಿಲ್ಲ ಈ ಫೀಚರ್….!

- Advertisement -

watsapp updates:

ವರ್ಷದ ಆರಂಭದಲ್ಲಿ ವಾಟ್ಸ್​ಆ್ಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದುವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ ಆಯ್ಕೆ ಇತ್ತು. ಇದೊಂದು ಕಾರಣದಿಂದ ಅನೇಕರು ಈ ಆಯ್ಕೆಯಿಂದ ಬೇಸರಗೊಂಡಿದ್ದರು. ಇದೀಗ ವಾಟ್ಸ್​ಆ್ಯಪ್ ತನ್ನ ವೀವ್ ಒನ್ಸ್ ಫೀಚರ್​ನಲ್ಲಿ ಸ್ಕ್ರೀನ್ ಶಾಟ್ ತೆಗೆಯುವ ಆಯ್ಕೆಯನ್ನು ಬ್ಲಾಕ್ ಮಾಡಲು ಮುಂದಾಗಿದೆ.

ಇನ್ನು ಪ್ರೊಫೈಲ್ ಫೋಟೋದಲ್ಲಿ ಅವತಾರ್ ಎಂಬ ಆಯ್ಕೆಯನ್ನು ವಾಟ್ಸ್​ಆ್ಯಪ್ ಅಭಿವೃದ್ದಿ ಪಡಿಸುತ್ತಿರುವ ಬಗ್ಗೆ ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಮಾಡಿದೆ. ಈ ಅವತಾರ್ ಫೀಚರ್ ಅನ್ನು ಬಳಸಿ ನಿಮ್ಮ ಪ್ರೊಫೈಲ್ ಫೋಟೋವನ್ನು ಇನ್ನಷ್ಟು ಸುಂದರವಾಗಿ ಕಾಣುವಂತೆ ಮಾಡಬಹುದು. ಅಂದರೆ, ಇಲ್ಲಿ ನಿಮಗೆ ಬ್ಯಾಕ್​ಗ್ರೌಂಡ್ ಕಲರ್ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಸದ್ಯಕ್ಕೆ ಪರೀಕ್ಷಾ ಹಂತದಲ್ಲಿರುವ ಈ ಫೀಚರ್ ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್, ಐಒಎಸ್ ಹಾಗೂ ಡೆಸ್ಕ್ ಟಾಪ್ ಬಳಕೆದಾರರಿಗೆ ಸಿಗಲಿದೆ.

ಚಿಕ್ಕಮಗಳೂರು: ರಂಭಾಪುರಿ ಶ್ರೀಗಳ ಮುಂದೆ ಸಿದ್ದು ಪಶ್ಚಾತ್ತಾಪ…!

- Advertisement -

Latest Posts

Don't Miss