Political News: ರಾಜ್ಯದ 7 ಜಿಲ್ಲೆಗಳಲ್ಲಿ ಈ ವರ್ಷ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದ ಎದುರು ಕೃಷಿ ಸಭೆ ನಡೆಸಿದ ಬಳಿಕ ಮಾತನಾಡಿದ ಚಲುವರಾಯಸ್ವಾಮಿ, ವಿಜಯನಗರ, ಯಾದಗಿರಿ, ಕೋಲಾರ, ಗದಗ, ಚಾಮರಾಜನಗರ, ರಾಮನಗರ, ಉಡುಪಿಯಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಬಿತ್ತನೆ ಬೀಜ ಹಂಚಿಕೆ ಬಗ್ಗೆ ಮಾತನಾಡಿರುವ ಚೆಲುವರಾಯಸ್ವಾಮಿ, ರೈತರಿಗೆ ಸರಿಯಾದ ರೀತಿಯಲ್ಲಿ ಬಿತ್ತನೆ ಬೀಜ, ರಸಗೊಬ್ಬರವನ್ನು ತಲುಪಿಸಿ. ಅವರನ್ನು ವಿನಾಕಾರಣ ಅಲೆದಾಡಿಸಬೇಡಿ. ಬೆಳೆ ವಿಮೆ ಬಗ್ಗೆ ಹೆಚ್ಚಿನ ಮಾಹಿತಿ ಬಿತ್ತರಿಸಿ, ಕೃಷಿ ಒಂದು ಲಾಭದಾಯಕ ವೃತ್ತಿಯನ್ನಾಗಿಸಿ ಮಾಡಿ ಎಂದು ಸಚಿವರು ಹೇಳಿದ್ದಾರೆ. ಅಲ್ಲದೇ ಆದಷ್ಟು ಬೇಗ ಬಜೆಟ್‌ನಲ್ಲಿ ಹೇಳಿರುವ ಕೃಷಿಗೆ ಸಂಬಂಧಿಸಿದ ಯೋಜನೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ, ಡಿ.ಕೆ.ಶಿ ಎಂದಿಗೂ ಸಿಎಂ ಆಗುವುದಿಲ್ಲ: ಚೇತನ್ ಅಹಿಂಸಾ
ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ: ಮಹೇಶ್ ಟೆಂಗಿನಕಾಯಿ
ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video