Wednesday, October 15, 2025

Latest Posts

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

- Advertisement -

ಆಪರೇಷನ್‌ ಸಿಂಧೂರ್‌ ವಿಶೇಷ :

ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ.

ಸೇನೆಯ ಬಗ್ಗೆ ನನಗೆ ಹೆಮ್ಮೆಯಿದೆ,..

ಇನ್ನೂ ಸಭೆಯ ಬಳಿಕ ಮಾತನಾಡಿದ ರಾಹುಲ್‌ ಗಾಂಧಿ, ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳು ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆಗೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲ ಇದೆ. ಈ ಸಮಯದಲ್ಲಿ ನಮ್ಮ ಸೈನಿಕರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ, ಅವರಿಗೆ ಶುಭವಾಗಲಿ. ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಅವರೊಂದಿಗೆ ಇದೆ ಎಂದು ಅವರು ಹೇಳಿದ್ದಾರೆ. ನಮ್ಮ ಸೇನೆಯ ಬಗ್ಗೆ ನನಗೆ ಹೆಮ್ಮೆ ಇದೆ, ನಾನು ಸೇನೆಯನ್ನು ತುಂಬಾ ಪ್ರೀತಿಸುತ್ತೇನೆ ಎಂದು ಭಾರತೀಯ ಸೇನೆಗೆ ರಾಹುಲ್‌ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸೇನೆ, ಕೇಂದ್ರದ ಪ್ರತಿ ಹೆಜ್ಜೆ ಬೆಂಬಲಿಸುತ್ತೇವೆ..

ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ಆಪರೇಷನ್ ಸಿಂಧೂರ್‌ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ ಇದೆ. ನಮ್ಮ ಸಶಸ್ತ್ರ ಪಡೆಗಳು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿವೆ. ಅವರ ಧೈರ್ಯ ಮತ್ತು ನಿರ್ಣಾಯಕ ಕ್ರಮಕ್ಕೆ ನಾವು ಹೆಮ್ಮೆಪಡುತ್ತೇವೆ. ಆಪರೇಷನ್ ಸಿಂಧೂರ್ ಅನ್ನು ಯಶಸ್ವಿಯಾಗಿ ನಡೆಸಿದ ಭಾರತದ ಭದ್ರತಾ ಪಡೆಗಳಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಖರ್ಗೆ ಭಾರತೀಯ ಸೇನೆಯನ್ನು ಹೊಗಳಿದ್ದಾರೆ.
ಕಾಂಗ್ರೆಸ್ ಪಕ್ಷವು ಸರ್ಕಾರ ಮತ್ತು ಸೇನೆಯೊಂದಿಗೆ ಇದ್ದು, ಅವರ ಪ್ರತಿಯೊಂದು ಹೆಜ್ಜೆಯನ್ನೂ ಬೆಂಬಲಿಸುತ್ತದೆ. ಸರ್ಕಾರದ ಪ್ರತಿಯೊಂದು ಕ್ರಮಕ್ಕೂ ಕಾಂಗ್ರೆಸ್ ಬೆಂಬಲ ನೀಡುತ್ತದೆ. ಈ ವಿಷಯದಲ್ಲಿ ಯಾವುದೇ ತಾರತಮ್ಯವಿಲ್ಲ, ಎಲ್ಲರೂ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.

ಸೇನೆಯ ಶೌರ್ಯ, ಸಾಹಸದ ಬಗ್ಗೆ ಹೆಮ್ಮೆಯಿದೆ..

ನಾವು ಭಾರತೀಯ ಸೇನೆ, ಅದರ ಶೌರ್ಯ ಮತ್ತು ಸಾಹಸದ ಬಗ್ಗೆ ಹೆಮ್ಮೆಪಡುತ್ತೇವೆ. ಕಾಂಗ್ರೆಸ್ ಪಕ್ಷವು ದೇಶದ ವೀರ ಸೈನಿಕರೊಂದಿಗೆ ಇದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಹೊರಬರುವ ಭಯೋತ್ಪಾದನೆಯ ವಿರುದ್ಧ ಭಾರತದ ಸ್ಪಷ್ಟ ಮತ್ತು ದೃಢವಾದ ರಾಷ್ಟ್ರೀಯ ನೀತಿಯನ್ನು ಪಕ್ಷವು ಬೆಂಬಲಿಸಿದೆ. ಭಾರತೀಯ ಸಶಸ್ತ್ರ ಪಡೆಗಳ ಧೈರ್ಯಕ್ಕೆ ಕಾಂಗ್ರೆಸ್‌ ಸಭೆಯು ನಮಸ್ಕರಿಸಿದೆ. ನಮ್ಮ ನಾಯಕರು ದೇಶದ ಏಕತೆ ಮತ್ತು ಸಮಗ್ರತೆಗಾಗಿ ಯಾವಾಗಲೂ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ, ರಾಷ್ಟ್ರೀಯ ಹಿತಾಸಕ್ತಿಯನ್ನು ಅತ್ಯಂತ ಪ್ರಮುಖವಾಗಿ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇನ್ನೂ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ನಮ್ಮ ಸಶಸ್ತ್ರ ಪಡೆಗಳು ನಡೆಸಿದ ಧೈರ್ಯ ಮತ್ತು ನಿರ್ಣಾಯಕ ಕ್ರಮದ ಬಗ್ಗೆ ನಮಗೆ ಹೆಮ್ಮೆ ಇದೆ. ಆಪರೇಷನ್ ಸಿಂಧೂರ್ ನಡೆಸಿ ಸೂಕ್ತ ಪ್ರತ್ಯುತ್ತರ ನೀಡಿದ ನಮ್ಮ ಭದ್ರತಾ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ಸಹ ಒಟ್ಟಾಗಿ ಕೆಲಸ ಮಾಡುತ್ತಿವೆ ಮತ್ತು ನಾವು ಸೇನೆ ಮತ್ತು ಸರ್ಕಾರಕ್ಕೆ ನಮ್ಮ ಬೆಂಬಲವನ್ನು ಪುನರುಚ್ಚರಿಸುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

=

- Advertisement -

Latest Posts

Don't Miss