Wednesday, June 18, 2025

Latest Posts

ಪ್ರಯಾಣಿಕರ ಕುಟುಂಬದೊಂದಿಗೆ ನಾವಿದ್ದೇವೆ : ಕೇಂದ್ರ ನಾಗರಿಕ ವಿಮಾನಯಾನ ಸಚಿವ

- Advertisement -

National News: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ.

ಘಟನೆಯ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರೋ ಪ್ರಧಾನಿ..

ಇನ್ನೂ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ದುರಂತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಖುದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಘಟನೆಯ ಕ್ಷಣ ಕ್ಷಣದ ಮಾಹಿತಿ ಪಡೆದಿದ್ದಾರೆ.

ಪ್ರಯಾಣಿಕರ ಜೊತೆ ನಾವಿದ್ದೇವೆ..

ಇನ್ನೂ ದುರಂತದ ಕುರಿತು ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು, ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಬಗ್ಗೆ ಕೇಳಿ ನನಗೆ ಆಘಾತವಾಯಿತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವಿಮಾನದಲ್ಲಿದ್ದ ಪ್ರಯಾಣಿಕರ ಜೊತೆ ನಾವಿದ್ದೇವೆ ಎಂದು ಹೇಳಿದ್ದಾರೆ.

ಪ್ರಯಾಣಿಕರು ಹಾಗೂ ಅವರ ಕುಟುಂಬಳಿಗಾಗಿ ನಾನು ಪ್ರಾರ್ಥಿಸುತ್ತೇನೆ.

ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ನಮ್ಮ ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ವೈದ್ಯಕೀಯ ನೆರವು ನೀಡುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯ ಬಗ್ಗೆ ಮಾಹತಿ ಪಡೆಯುತ್ತಿದ್ದೇನೆ. ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಅವರ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಟ್ವೀಟ್ಟರ್​ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ಅಂದರೆ ಮುಖ್ಯವಾಗಿ ಮೆಡಿಕಲ್ ವಿದ್ಯಾರ್ಥಿಗಳಿದ್ದ ಮೆಸ್ ಮೇಲೆ ಪತನಗೊಂಡ ಕ್ಷಣವೇ ಬೆಂಕಿ ಹೊತ್ತಿಕೊಂಡಿದೆ.

ಪತನವಾದ ವಿಮಾನದಲ್ಲಿ 169 ಭಾರತೀಯರಿದ್ದರು..

ಅಲ್ಲದೆ ಪತನಗೊಂಡ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅದರಲ್ಲಿ 169 ಭಾರತೀಯರು ಸೇರಿದಂತೆ 12 ಮಕ್ಕಳು ಇರುವ ಮಾಹಿತಿ ಲಭ್ಯವಾಗಿದೆ. ವಿಮಾನ ಪತನದ ಬಳಿಕ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ನಿಖರವಾಗಿ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿಲೋ ಮೀಟರ್ ದೂರದಲ್ಲಿ ವಿಮಾನ ಪತನಗೊಂಡಿದೆ.

ಈ ಅವಘಡದಲ್ಲಿ 110 ಮಂದಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕವಿದೆ. ಗಾಯಾಗಳುಗಳನ್ನು ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಇನ್ನೂ ಘಟನಾ ಸ್ಥಳಕ್ಕೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ರಾಮ್ ಮೋಹನ್ ನಾಯ್ಡು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ದೌಡಾಯಿಸುತ್ತಿದ್ದಾರೆ.

- Advertisement -

Latest Posts

Don't Miss