ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡ್ತೀವಿ: ರೇವಣ್ಣ

Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ.

ತಮ್ಮ ಮೇಲೆ ಎರಡು ಪ್ರಕರಣಗ ದಾಖಲು ವಿಚಾರದ ಬಗ್ಗೆ ಮಾತನನಾಡಿದ ರೇವಣ್ಣ, ಯಾರು ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತೆ, ಟೈಂ ಬೇಕು ಅಷ್ಟೇ. ನಮ್ಮ ಜಿಲ್ಲೆಯ ಜನರನ್ನು ಅರವತ್ತು ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನೀದ್ದೀನಿ, ಎ.ಮಂಜು, ಸ್ವರೂಪ್‌ಪ್ರಕಾಶ್ ಇದ್ದಾರೆ. ಯಾರು ಭಯಪಡುವ, ಆತಂಕಪಡುವ ಅಗತ್ಯವಿಲ್ಲ. ನನಗೂ ಜಿಲ್ಲೆಯ ಜನ ಇಪ್ಪತ್ತೈದು ವರ್ಷ ಆಶೀರ್ವಾದ ಮಾಡಿದ್ದಾರೆ ಎಂದು ರೇವಣ್ಣ ಹೇಳಿದರು.

48 ಗಂಟೆಗಳಲ್ಲಿ ಪ್ರಜ್ವಲ್‌ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ವಿಚಾರದ ಬಗ್ಗೆ ಕೇಳಿದಾಗ, ರೇವಣ್ಣ ಈ ಬಗ್ಗೆ ಮಾತನಾಡಲು ತಿರಸ್ಕರಿಸಿದರು. ಸರ್ಕಾರ ಬಂದು ಒಂದು ವರ್ಷ ಆಯ್ತು. ಯಾವುದಾದರೂ ರಸ್ತೆ ಗುಂಡಿ ಮುಚ್ಚಿದ್ದಾರಾ..? ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದಾರಾ..? ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ..? ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲಾ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಏನು ಕೊಡುಗೆ ಕೊಡಿಸಿದ್ದಾರೆ..? ಎಂದು ರೇವಣ್ಣ ಪ್ರಶ್ನಿಸಿದ್ದಾರೆ.

ನಾವು ಶಾಲಾ, ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟು ತೋರಿಸಿದ್ದೇವೆ. ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈಗ ಹದಿನೈದನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಮೊದಲನೇ ಸ್ಥಾನದಲ್ಲಿತ್ತು. ಈ ರೀತಿಯಾಗಲೂ ಕಾರಣ ಯಾರು..? ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರೆ ಅದು ಕುಮಾರಸ್ವಾಮಿ ಎಂದು ಸಹೋದರನ ವಿರುದ್ಧ ರೇವಣ್ಣ ಬ್ಯಾಟ್‌ ಬೀಸಿದ್ದಾರೆ.

ಕುಮಾರಸ್ವಾಮಿ ಆಡಳಿತದಲ್ಲಿ ಇದ್ದ ಕಾಲದಲ್ಲಿ 1500 ಹೈಸ್ಕೂಲ್, 240 ಪ್ರಥಮ ದರ್ಜೆ ಕಾಲೇಜು ತೆರೆದರು. ಖಾಲಿ ಇದ್ದ ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy). ಐವತ್ತು ವರ್ಷ ಆಡಳಿತದ ಕಾಂಗ್ರೆಸ್ ಕೈಯಲ್ಲೂ ಆಗಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ಇಡೀ ಇಂಡಿಯಾ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು, ಕುಮಾರಸ್ವಾಮಿ, ನಮ್ಮ ಜೆಡಿಎಸ್‌ ಶಾಸಕರು. ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆ ಮಾಡಿಲ್ಲ. ಶಿಕ್ಷಕರ ಮಕ್ಕಳ ಹತ್ತು ಪರ್ಸೆಂಟ್ ಮೀಸಲಾತಿ ಕೊಡಬೇಕು ಎಂದು ಮಾಜಿ ಶಾಸಕ ರೇವಣ್ಣ(H.D.Revanna) ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ

Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು

National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

About The Author