Sunday, April 20, 2025

Latest Posts

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

- Advertisement -

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಬರೆದಿದ್ದು, ಸಿಎಂ ಸಿದ್ದರಾಮಯ್ಯ ಏನೇನು ಮಾಡಿದ್ದಾರೆಂಬುದರ ಬಗ್ಗೆ ಹಾಡು ಹಾಡಿದ್ದಾರೆ. ಪಕ್ಷಪಾತ ಮಾಡಿ ಜಗಳ ಮಾಡ್ಯಾನ. ಹೆಣ್ಣು ಮಕ್ಕಳಿಗೆ ಜಗಳ ಹಚ್ಯಾನ ಎಂದು ಹಾಡು ಹೇಳಿದ್ದಾರೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ, ಪೊಲೀಸರು, ರೇಣುಕಾ ಸುಕುಮಾರನ್ ವಿರುದ್ಧ ಬಿಜೆಪಿಗರು ಧಿಕ್ಕಾರ ಕೂಗಿದ್ದಾರೆ. ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದಾರೆ.

ಇನ್ನು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭದ್ರತಾ ದೃಷ್ಟಿ ನಿಲ್ಲಿಸಿರುವ ಪೋಲಿಸ್ ಬಸ್ ತೆಗೆಯುವಂತೆ ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಸ್ ಹಿಂತೆಗೆಯಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಆಗ ಬಸ್ ನಾವೇ ತೆಗೆಯುತ್ತೇವೆ ಎಂದು ಇಬ್ಬರ ನಡುವೆ ಮಾತಿನ ಚಕಮಕಿಯಾಗಿದೆ.

ಬಳಿಕ ಸ್ಥಳಕ್ಕೆ ಬಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಹರ ಠಾಣೆ ಮುಂದೆ ನಿಲ್ಲಿಸಿದ ಜೀಪ್‌ ತೆಗೆಯುವಂತೆ ಅಶೋಕ್ ಮನವಿ ಮಾಡಿದ್ದಾರೆ. ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಅಶೋಕ್ ಎಚ್ಚರಿಕೆ ಕೊಡ್ಡ ಬಳಿಕ, ಪೊಲೀಸರು ಪೊಲೀಸ್ ಠಾಣೆಯ ಮುಂದಿದ್ದ ವಾಹನವನ್ನು ಹಿಂದೆಗೆದಿದ್ದಾರೆ.

ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್

ರೋಗಿಯ ಕುಟುಂಬಸ್ಥರ ಒಪ್ಪಿಗೆ ಇದ್ದರೆ ಮಾತ್ರ ICUಗೆ ದಾಖಲಿಸಬಹುದು: ಕೇಂದ್ರ ಆಸ್ಪತ್ರೆಯ ಹೊಸ ರೂಲ್ಸ್

ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿಯ ದರ್ಶನ ಪಡೆದ ಮಂಗಳಮುಖಿ..

- Advertisement -

Latest Posts

Don't Miss