www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು ತಂದoತಹ ಪಕ್ಷದ ನಾಯಕನಿಗೆ ಮತ್ತು ಕಾರ್ಯಕರ್ತರಿಗೆ ಹಾಗೇ ಮತಹಾಕಿತ ಜನರಿಗೂ ಕೂಡಾ ಅಭಿನಂದನೆಯನ್ನು ಹೇಳುತ್ತೆನೆ ಎಂದು ಬೊಮ್ಮಾಯಿ ಹೇಳಿದರು. ಹಾಗೇ ಹಾನಗಲ್ ಕ್ಷೇತ್ರದ ಸೋಲಿನ ಕುರಿತು ನಾವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದ್ದೇವೆ. ಈ ಅಂತರವನ್ನು ನಾವು ಸಾಧಿಸಬಹುದಾಗಿತ್ತು. ಕಾರಣಗಳನ್ನು ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಹೋಗುವ ಕೆಲಸವನ್ನು ಮಾಡುತ್ತೇವೆ, ಹಾನಗಲ್ನಲ್ಲಿ ದಿ. ಸಿ.ಎಂ. ಉದಾಸಿಯವರಿಗಿದ್ದ ಜನಪ್ರಿಯತೆಯನ್ನು ಸ್ವಲ್ಪಮಟ್ಟಿಗೆ ನಮ್ಮಿಂದ ಮುಂದುವರೆಸಲಾಗಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಉತ್ತಮವಾಗಿ ಕೆಲಸ ಮಾಡಿದ್ದಾರೆ, ಅದಕ್ಕೆ ಜನ ಅವರನ್ನು ಬೆಂಬಲಿಸಿದ್ದಾರೆ,” ಎಂದು ಬೊಮ್ಮಾಯಿ ಹೇಳಿದರು. ಇನ್ನೂ “ಒಂದು ವರ್ಷದಂತೆ ಪ್ರಮುಖ ಘಟ್ಟವೇನಲ್ಲ. ಆದರೆ, 100 ದಿನದಲ್ಲಿ ಸರ್ಕಾರದ ದಿಕ್ಕು, ಭರವಸೆ, ಸಮಸ್ಯೆಗಳನ್ನು ಎದುರಿಸಿದ ರೀತಿ, ಇವುಗಳ ಸ್ಥೂಲವಾಗಿ ಮಾಹಿತಿ ನೀಡಲಾಗುವುದು,” ಎಂದು ಹೇಳಿದರು.