Friday, April 18, 2025

Latest Posts

ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ: ಬಿಜೆಪಿ ವಿರುದ್ಧ ಹರಿಪ್ರಸಾದ್ ವ್ಯಂಗ್ಯ..!

- Advertisement -

Political News: ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ ಆ ನಂತರ ಹಿಜಾಬ್ ಇರಬೇಕು ಅನ್ನೋದು ನನ್ನ ಕಲ್ಪನೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯವರು ಸಮಾನತೆ ವಿಚಾರ ಮಾತಾಡ್ತಾರೆ. ಅಹಾರ, ಉಡುಪಿನ ಹಕ್ಕು ಎಲ್ಲರ ವೈಯಕ್ತಿಕ. ಬಿಜೆಪಿಗೆ ರೈತರು, ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ. ಈ ವಿಚಾರ ಮಾತಾಡ್ತಿದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡ್ತೀವಿ. ನಮ್ಮು ಜಾತ್ಯಾತೀತ ರಾಷ್ಟ್ರ, ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.

ಕಾಂಗ್ರೆಸ್ ತುಷ್ಟಿಕರಣ ಮಾಡುತ್ತಿಲ್ಲ. ಬಹು ಸಂಖ್ಯಾತರ ತುಷ್ಟಿಕರಣ ಮಾಡ್ತಿರೋದು ಬಿಜೆಪಿ, ಹಿಂಸೆ ಸುಳ್ಳನ್ನು ಪ್ರಚಾರ ಮಾಡ್ತಿರೋದು ಬಿಜೆಪಿ. ಅಲ್ಪ ಸಂಖ್ಯಾತರು, ಮೀಸಲಾತಿ ವಿಚಾರದಲ್ಲಿ ಇವರು ವಿರೋಧ. ನಾಗಪುರದಲ್ಲಿ ಇರೋ ಇವರ ಸೂತ್ರಧಾರರು ಜಾತಿ ಗಣತಿ ವಿರೋಧಿಗಳು ಎಂದು ಪರೋಕ್ಷವಾಗಿ RSS ನಾಯಕರ ವಿರುದ್ಧ ಹರಿಪ್ರಸಾದ್ ಹರಿಹಾಯ್ದರು.

ಇವರಿಂದ ನಾವು ಕಲಿಯಬೇಕಾಗಿಲ್ಲ. ನಾವು ಟಿಪ್ಪು ಸುಲ್ತಾನ ಪಾರ್ಟ್ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು. ಪರೋಕ್ಷವಾಗಿ ಬಿಜೆಪಿಯವರು ಬೂಟು ನೆಕ್ಕೋರು ಎಂದು ವ್ಯಂಗ್ಯವಾಡಿದರು.

ನಾನು ಲೋಕಸಭೆ ಚುನಾವಣೆಗೆ ಆಕಾಂಕ್ಷಿ. ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಾಯಕ ಸಮಾಜದ ಪರ ಹೋರಾಟ ನಮ್ಮೆಲ್ಲರ ಇಚ್ಛೆ. ಸಮಾಜದಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆ ಬಗೆಹರಿಬೇಕು. ಮಲ್ಲಿಕಾರ್ಜುನ ಖರ್ಗೆ ಹೆಸರು ಬಂದಿರೋದು ಸೂಕ್ತ. ಪ್ರಧಾನಿ ಮಂತ್ರಿ ಹುದ್ದೆಗೆ ಹೆಸರು ಬಂದಿರೋದು ಸಂತೋಷ ಎಂದ ಅವರು, ಈಡಿಗ ಸಮಾವೇಶದಿಂದ ನಾನು ದೂರ ಇದ್ದೆ. ಧ್ವನಿ ಇಲ್ಲದವರಿಗೆ ಧ್ವನಿ ಕೊಡಬೇಕು. ರಾಜಕಾರಣದಲ್ಲಿ ಯಾರನ್ನೂ ತುಳಿಯೋಕೆ ಆಗಲ್ಲ. ತುಳಿತೀನಿ ಅಂದಿದ್ರೆ ಅವರು ಭ್ರಮನಿರಸನದಲ್ಲಿ ಇರ್ತಾರೆ ಎಂದು ಪರೋಕ್ಷವಾಗಿ ಸಿದ್ದು ವಿರುದ್ಧ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ – ಸಚಿವ ಸಂತೋಷ್ ಲಾಡ್

ಕಿವಿಗೆ ಪೆಟ್ಟು ಬೀಳುವಷ್ಟು ಕೆಟ್ಟದಾಗಿ ಪತ್ನಿಗೆ ಹೊಡೆದ್ರಾ ವಿವೇಕ್ ಬಿಂದ್ರಾ..?

ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್

- Advertisement -

Latest Posts

Don't Miss