Dharwad News: ಧಾರವಾಡ: ಧಾರವಾಡದಲ್ಲಿಂದು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು, ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ನಡೆಸಿದರು.
ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ಕೋಡಿಹಳ್ಳಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಇಂತಹ ಸಂದರ್ಭದಲ್ಲಿ ತೆಲಂಗಾಣ ರಾಜ್ಯಕ್ಕೆ ಚುನಾವಣೆ ಪ್ರಚಾರಕ್ಕೆ ಹೋಗ್ತಾ ಇದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಮಾಡಿ, ಏನು ಕಡಿದು ಕಟ್ಟೆ ಹಾಕಿದ್ದೀವಿ ಅಂತಾ, ಹೊರ ರಾಜ್ಯದಲ್ಲಿ ಚುನಾವಣೆಯಲ್ಲಿ ಬ್ಯೂಸಿ ಆಗಿದ್ದಾರೆ.? ಎಂದು ಚಂದ್ರಶೇಖರ್ ಪ್ರಶ್ನಿಸಿದ್ದಾರೆ.
ರಾಜ್ಯಕ್ಕೆ ಬರಗಾಲ ಇರುವ ಕಾರಣ ಕೆವಲ 350 ಕೋಟಿ ಮಂಜೂರು ಮಾಡಿದ್ದಾರೆ. ಅದರಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹಂಚಿಕೆ ಮಾಡಿದ್ದಾರೆ. ಕೇಂದ್ರಕ್ಕೆ ಯಾವುದೇ ರೀತಿಯಲ್ಲಿ ಬರಪರಿಹಾರ ಕುರಿತು ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿಲ್ಲಾ. ರಾಜ್ಯದ ಬರಪರಿಹಾರಕ್ಕೆ 1 ಲಕ್ಷ ಕೋಟಿ ಪರಿಹಾರ ಬೇಕು. ಅದನ್ನು ಬಿಟ್ಟು ರಾಜ್ಯ ಸರ್ಕಾರ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬ್ಯೂಸಿ ಆಗಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ನಾವು ಪ್ರಚಾರ ಮಾಡುತ್ತೇವೆ . ಕಾಂಗ್ರೆಸ್ ಮೂರು ಕೃಷಿ ಕಾಯಿದೆ ವಾಪಸ್ ಮಾಡುತ್ತೇವೆ ಎಂದಿದ್ದರು. ರಾಹುಲ್ ಗಾಂಧಿಯೇ ಹೇಳಿದ್ದರು. ರಾಜ್ಯದಲ್ಲಿ ಅವರದೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ರೈತರಿಗೆ ಮಾರಕವಾದ ಕೃಷಿ ಕಾಯಿದೆಗಳು ರದ್ದು ಆಗಿಲ್ಲ. ಹೀಗಾಗಿ ಇವರು ಸುಳ್ಳು ಹೇಳಿದ್ದಾರೆ. ನಾನು ಇದನ್ನು ತೆಲಂಗಾಣಕ್ಕೆ ಹೋಗಿ ಹೇಳುವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳುವುದು ಸುಳ್ಳು. ಸಿದ್ದರಾಮಯ್ಯ, ಡಿಕೆಶಿ ಹೇಳುವುದೆಲ್ಲ ಸುಳ್ಳು ಎಂದು ಹೇಳುವೆ. ಕಾಂಗ್ರೆಸ್ ಕರ್ನಾಟಕದಲ್ಲಿ ಏನೂ ಮಾಡಿಲ್ಲ ಎಂದು ಹೇಳುವೆ. ಇದಕ್ಕಾಗಿ ಇದೇ 22ರಂದು ನಾನು ತೆಲಂಗಾಣಕ್ಕೆ ಹೋಗುತ್ತಿರುವೆ. ಅಲ್ಲಿ ರೈತ ಸಮಾವೇಶ ಮಾಡಿ ಅಲ್ಲಿ ಜನರಿಗೆ ತಿಳಿಸುತ್ತೇವೆ. ಇವರು ಪಂಚರಾಜ್ಯ ಚುನಾವಣೆಯಲ್ಲಿ ಕರ್ನಾಟಕದ ಬಗ್ಗೆ ಹೇಳುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಇವರು ಏನೂ ಮಾಡಿಲ್ಲ. ಅದನ್ನು ನಾವು ಆ ರಾಜ್ಯದ ಜನರಿಗೆ ತಿಳಿಸಲು ಮುಂದಾಗಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಎಣ್ಣೆ’ ಹೊಡೆದಿದ್ದ ಇಲಿಯನ್ನು ಬಂಧಿಸಿದ ಪೊಲೀಸರು! ಅಚ್ಚರಿ ಎನಿಸಿದರೂ ಇದು ಸತ್ಯ!
‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘



